ಸುಳ್ಯ, ಆ. 11 (DaijiworldNews/SM): ತಲಕಾವೇರಿ ಬ್ರಹ್ಮಗಿರಿ ಬೆಟ್ಟ ಜರಿದು ಮಣ್ಣಿನಡಿ ಸಿಲುಕಿ ನಾಪತ್ತೆಯಾಗಿರುವ ಐದು ಮಂದಿಯಲ್ಲಿ ಮತ್ತೊಬ್ಬರ ಮೃತದೇಹ ಪತ್ತೆಯಾಗಿದೆ. ಮಂಗಳವಾರದಂದು ತಲಕಾವೇರಿ ಕ್ಷೇತ್ರದ ಪ್ರಧಾನ ಅರ್ಚಕ ನಾರಾಯಣ ಆಚಾರ್ಯ(80) ಅವರ ಮೃತದೇಹ ಇಂದು ಪತ್ತೆಯಾಗಿದೆ.

ಇನ್ನು ನಾರಾಯಣ ಆಚಾರ್ಯ ಅವರ ಸಹೋದರ ತೀರ್ಥನಂದ ಅವರ ಶವ 2 ದಿನದ ಹಿಂದೆ ಪತ್ತೆಯಾಗಿತ್ತು. ವಿಪರೀತ ಮಳೆಯ ಹಿನ್ನಲೆಯಲ್ಲಿ ಕಾರ್ಯಾಚರಣೆಗೆ ತೊಡಕಾಗಿತ್ತು. ಇಂದು ಮಳೆ ಕಡಿಮೆಯಾಗಿರುವ ಹಿನ್ನಲೆಯಲ್ಲಿ ಕಾರ್ಯಾಚರಣೆ ಮುಂದುವರಿಸಲಾಗಿತ್ತು. ನಿರಂತರವಾಗಿ ಕಾರ್ಯಾಚರಣೆ ನಡೆಸಿದ ಸಂದರ್ಭ ಅವರ ಮೃತದೇಹ ಪತ್ತೆಯಾಗಿದೆ. ಇನ್ನು ಬೆಳಿಗ್ಗೆ ಅರ್ಚಕರ ಕಾರು ಪತ್ತೆಯಾಗಿತ್ತು.