ಉಡುಪಿ, ಆ. 11 (DaijiworldNews/SM): ಜಿಲ್ಲೆಯಲ್ಲಿ ಮತ್ತೆ 219 ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಆ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 6503ಕ್ಕೆ ಏರಿಕೆಯಾಗಿದೆ. ಸದ್ಯ ಜಿಲ್ಲೆಯಲ್ಲಿ 2676 ಸಕ್ರಿಯ ಪ್ರಕರಣಗಳಿವೆ.

36 ಐಎಲ್ ಐ ಪ್ರಕರಣಗಳಾಗಿವೆ. ಪ್ರಾಥಮಿಕ ಸಂಪರ್ಕದಿಂದ 64 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಇಬ್ಬರಲ್ಲಿ ಸಾರಿ ಪ್ರಕರಣ ದೃಢಪಟ್ಟಿದೆ. 112 ಪ್ರಕರಣಗಳ ಸಂಪರ್ಕ ಪತ್ತೆ ಹಚ್ಚಲಾಗುತ್ತಿದೆ. ಅಂತರಾಷ್ಟ್ರೀಯ ಮತ್ತು ದೇಶೀಯ ಪ್ರಯಾಣ ಹಿನ್ನಲೆ ಹೊಂದಿರುವ ತಲಾ ಒಬ್ಬರಲ್ಲಿ ಸೊಂಕು ಪತ್ತೆಯಾಗಿದೆ.
ಇನ್ನು ಕೋವಿಡ್ ಕಾರಣದಿಂದ ಜಿಲ್ಲೆಯಲ್ಲಿ ಮಂಗಳವಾರದಂದು ಮತ್ತೆ ನಾಲ್ವರು ಸಾವನ್ನಪ್ಪಿದ್ದಾರೆ. ಕಾರ್ಕಳ ತಾಲೂಕಿನ 35 ವರ್ಷದ ಯುವಕ, ಬೈಂದೂರಿನ 48 ವರ್ಷದ ಪುರುಷ, ಉಡುಪಿ ತಾಲೂಕಿನ 66 ಮತ್ತು 41 ವರ್ಷ ಪ್ರಾಯದ ಪುರುಷರು ಕೊರೊನಾದಿಂದಾಗಿ ಸಾವನ್ನಪ್ಪಿದ್ದಾರೆ. ಆ ಮೂಲಕ ಜಿಲ್ಲೆಯಲ್ಲಿ ಒಟ್ಟು ಮೃತಪಟ್ಟವರ ಸಂಖ್ಯೆ 71ಕ್ಕೆ ಏರಿಕೆಯಾಗಿದೆ.