ಉಡುಪಿ, ಜು. 12 (DaijiworldNews/SM): ಜಿಲ್ಲೆಯಲ್ಲಿ ಮತ್ತೆ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗಿವೆ. ಜಿಲ್ಲೆಯಲ್ಲಿ ಬುಧವಾರದಂದು 263 ಮಂದಿಯಲ್ಲಿ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ.

ಇಂದಿನ ಸೋಂಕಿತರ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 6766ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಪ್ರಾಥಮಿಕ ಸಂಪರ್ಕದಿಂದ 97 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. 34 ಐಎಲ್ಐ ಪ್ರಕರಣಗಳು ಪತ್ತೆಯಾಗಿದ್ದು, ಅಂತರಾಜ್ಯ ಪ್ರಯಾಣದಿಂದ ನಾಲ್ವರಲ್ಲಿ ಸೋಂಕು ಪತ್ತೆಯಾಗಿದೆ. 128 ಮಂದಿಯ ಸೋಂಕಿನ ಮೂಲ ಪತ್ತೆ ಹಚ್ಚಲಾಗುತ್ತಿದೆ. ಬುಧವಾರದಂದು 198 ಮಂದಿ ಗುಣಮುಖರಾಗಿ ಡಿಸ್ವಾರ್ಜ್ ಆಗಿದ್ದಾರೆ.
ಉಡುಪಿ 142 ಪ್ರಕರಣಗಳು, ಕುಂದಾಪುರದಲ್ಲಿ 95 ಪ್ರಕರಣಗಳು, ಕಾರ್ಕಳದಲ್ಲಿ 23 ಪ್ರಕರಣಗಳು ಪತ್ತೆಯಾಗಿವೆ. ಬುಧವಾರದಂದು ಜಿಲ್ಲೆಯಲ್ಲಿ ಮತ್ತೆ ಮೂವರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.
ಕಾರ್ಕಳ ತಾಲ್ಲೂಕಿನ 81 ವರ್ಷದ ವ್ಯಕ್ತಿ ಹಾಗೂ ಉಡುಪಿಯ 66 ವರ್ಷದ ಮತ್ತು 35 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ.