ಮಂಗಳೂರು, ಜು. 12(DaijiworldNews/SM): ದ.ಕ. ಜಿಲ್ಲೆಯಲ್ಲಿ ಸೋಂಕಿನಿಂದ ಗುಣಮುಖರಾಗುವವರ ಸಂಖ್ಯೆ ಏರಿಕೆಯಾಗಿದೆ. ಬುಧವಾರದಂದು ಮತ್ತೆ 498 ಮಂದಿ ಗುಣಮುಖರಾಗಿ ಬಿಡುಗಡೆಗೊಂದಿದ್ದಾರೆ. ಈ ನಡುವೆ 229 ಮಂದಿಯಲ್ಲಿ ಬುಧವಾರದಂದು ಸೋಂಕು ಪತ್ತೆಯಾಗಿದೆ.

ಇಂದಿನ ಪಾಸಿಟಿವ್ ಪ್ರಕರಣಗಳ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 7825ಕ್ಕೆ ಏರಿಕೆಯಾಗಿದೆ. ಈ ಪೈಕಿ 5232 ಮಂದಿ ಒಟ್ಟು ಗುಣಮುಖರಾಗಿದ್ದು, ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಸದ್ಯ 2349 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಬುಧವಾರದಂದು ಮತ್ತೆ 7 ಮಂದಿ ಸೋಂಕಿಗೆ ಬಲಿಯಾಗಿದ್ದು, ಒಟ್ಟು ಸಾವಿನ ಸಂಖ್ಯೆ 244ಕ್ಕೆ ಏರಿಕೆಯಾಗಿದೆ.
ಇಂದು ಪತ್ತೆಯಾದ ಸೋಂಕಿತರ ಪೈಕಿ 36ಕ್ಕೆ ಏರಿಕೆಯಾಗಿದೆ. 113 ಮಂದಿ ಐಎಲ್ ಐ ಪ್ರಕರಣಗಳು ದೃಢಪಟ್ಟಿವೆ. 11 ಸಾರಿ ಪ್ರಕರಣಗಳು ಪತ್ತೆಯಾಗಿವೆ. 69 ಸೋಂಕಿತರ ಮೂಲ ಪತ್ತೆಯಾಗಿವೆ.