ಉಡುಪಿ, ಆ 13 (DaijiworldNews/PY): ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಲಾಲಾಜಿ ಮೆಂಡನ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಈ ಬಗ್ಗೆ ಸ್ವತಃ ಮಾಹಿತಿ ನೀಡಿರುವ ಅವರು, ನನ್ನ ಆಪ್ತ ಕಾರ್ಯದರ್ಶಿಯೋರ್ವರಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನಲೆ ಕಳೆದ 7 ದಿನಗಳಿಂದ ಹೋಂಕ್ವಾರಂಟೈನ್ನಲ್ಲಿದ್ದು ಮುಂಜಾಗ್ರತಾ ಕ್ರಮವಾಗಿ ನಾನು ಪರೀಕ್ಷೆ ಮಾಡಿಸಿದಾಗ ಕೊರೊನಾ ಸೋಂಕು ದೃಢಪಟ್ಟಿದ್ದು, ಯಾವುದೇ ಕೊರೊನಾ ಸೋಂಕಿನ ಲಕ್ಷಣಗಳು ಇಲ್ಲದಿರುವುದರಿಂದ ಕೊರೊನಾ ಕೇರ್ ಸೆಂಟರ್ನಲ್ಲಿ ಶುಶ್ರೂಷೆ ಪಡೆಯುತ್ತಿದ್ದೇನೆ. ಅಗತ್ಯ ಕಾರ್ಯಗಳಿಗೆ ಕಚೇರಿಯನ್ನು ಸಂಪರ್ಕಿಸಿ. ನಾನು ಆದಷ್ಟು ಬೇಗ ಕಾಪು ಜನತೆಯ ಸೇವೆಗೆ ಮರಳುತ್ತೇನೆ ತಮ್ಮ ಸಹಕಾರವಿರಲಿ ಎಂದು ತಿಳಿಸಿದ್ದಾರೆ.
ಲಾಲಾಜಿ ಮೆಂಡನ್ ಅವರು ಪ್ರಸ್ತುತ ಕೊರೊನಾ ಆರೈಕೆ ಕೇಂದ್ರದಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಅವರ ಕಾರ್ಯದರ್ಶಿಯೊಬ್ಬರಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆ ಮೆಂಡನ್ ಅವರು ಕಳೆದ 7 ದಿನಗಳಿಂದ ಹೋಂಕ್ವಾರಂಟೈನ್ನಲ್ಲಿದ್ದರು. ಕಾಪು ಜನರ ಸೇವೆಗೆ ಶೀಘ್ರವೇ ಮರಳುತ್ತೇನೆ ಎಂದು ಮೆಂಡನ್ ಅವರು ಹೇಳಿದ್ದಾರೆ.