ಮಂಗಳೂರು, ಆ. 13 (DaijiworldNews/SM): ದ.ಕ. ಜಿಲ್ಲೆಯಲ್ಲಿ ಮತ್ತೆ 246 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಈ ನಡುವೆ ಗುಣಮುಖರಾದವರ ಸಂಖ್ಯೆ ಉತ್ತಮವಾಗಿದೆ. ಗುರುವಾರದಂದು ಒಂದೇ ದಿನ 641 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.

ಇಂದಿನ ಸೋಂಕಿತರ ಮೂಲಕ ದ.ಕ. ಜಿಲ್ಲೆಯಲ್ಲಿ ಒಟ್ಟು ಪತ್ತೆಯಾದ ಸೋಂಕಿತರ ಸಂಖ್ಯೆ 8 ಸಾವಿರದ ಗಡಿದಾಟಿದೆ. ಜಿಲ್ಲೆಯಲ್ಲಿ ಇಲ್ಲಿಯ ತನಕ 8071 ಮಂದಿಯಲ್ಲಿ ಸೋಂಕು ಪತ್ತೆಯಾದಂತಾಗಿದೆ. ಗುರುವಾರದಂದು ಮತ್ತೆ 6 ಮಂದಿ ಸೋಂಕಿಗೆ ಬಲಿಯಾಗಿದ್ದು, ಸಾವಿನ ಸಂಖ್ಯೆ 250ಕ್ಕೆ ಏರಿಕೆಯಾಗಿದೆ. ಇನ್ನು ಇಲ್ಲಿಯ ತನಕ ಒಟ್ಟು 5873 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. 1948 ಮಂದಿ ಜಿಲ್ಲೆಯಲ್ಲಿ ಸದ್ಯ ಚಿಕಿತ್ಸೆಪಡೆಯುತ್ತಿದ್ದಾರೆ.