ಉಡುಪಿ, ಆ. 13 (DaijiworldNews/SM): ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಮತ್ತೆ ಹೆಚ್ಚಳವಾಗಿದೆ. ಗುರುವಾರದಂದು ಉಡುಪಿಯಲ್ಲಿ ಒಂದೇ ದಿನ 402 ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ.

ಜಿಲ್ಲೆಯಲ್ಲಿ ಒಟ್ಟು ಸೊಂಕಿತರ ಸಂಖ್ಯೆ 7174ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಗುರುವಾರ 209 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಸದ್ಯ ಜಿಲ್ಲೆಯಲ್ಲಿ 2966 ಸಕ್ರಿಯ ಪ್ರಕರಣಗಳಿವೆ. ಇಂದು ಜಿಲ್ಲಯಲ್ಲಿ ಒಬ್ಬರು ಸೋಂಕಿಗೆ ಬಲಿಯಾಗಿದ್ದಾರೆ. 56 ವರ್ಷ ಪ್ರಾಯದ ವ್ಯಕ್ತಿ ಇಂದು ಕೊವಿಡ್ ಗೆ ಬಲಿಯಾಗಿದ್ದಾರೆ.