ಮಂಗಳೂರು, ಆ 14 (DaijiworldNews/HR): ರಾಜ್ಯದ ಕರಾವಳಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಧಾರಕಾರವಾಗಿ ಸುರಿಯುತ್ತಿದ್ದ ಮಳೆ ಎರಡು ದಿನಗಳಿಂದ ಕೊಂಚ ಬಿಡುವು ಪಡೆದುಕೊಂಡಿದೆ.

ಇನ್ನು ಗುರುವಾರ ದಕ್ಷಿಣ ಕನ್ನಡ ಜಿಲ್ಲೆಯ ಅಲ್ಲಲ್ಲಿ ಸಾಧಾರಣ ಮಳೆಯಾಗಿತ್ತು.
ಮಂಗಳೂರು ಮತ್ತು ಉಡುಪಿ ನಗರದಲ್ಲಿ ಬೆಳಗ್ಗಿನ ವೇಳೆ ಸಾಧಾರಣ ಮಳೆಯಾಗಿದ್ದು, ಉಳಿದಂತೆ ಬಿಸಿಲು ಮತ್ತು ಮೋಡದಿಂದ ಕೂಡಿದ ವಾತಾವರಣ ಇತ್ತು.
ಜಿಲ್ಲೆಯ ಬಂಟ್ವಾಳ, ಕನ್ಯಾನ ವಿಟ್ಲ, ಪುತ್ತೂರು, ಉಪ್ಪಿನಂಗಡಿ, ಕಡಬ, ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ, ವೇಣೂರು, ಮೂಡುಬಿದರೆ, ಸುರತ್ಕಲ್, ಉಳ್ಳಾಲ, ಕುಂದಾಪುರ, ಕಾರ್ಕಾಳ, ಬ್ರಹ್ಮಾವರ, ಹೆಬ್ರಿ, ಕಾಪು, ಬೈಂದೂರು ಸೇರಿದಂತೆ ಅನೇಕ ಕಡೆಗಳಲ್ಲಿ ಸಾಧಾರಣ ಮಳೆಯಾಗಿದೆ.
ಕಳೆದ ಕೆಲವು ದಿನಗಳಿಂದ ರಾಜ್ಯದೆಲ್ಲೆಡೆ ಮಳೆರಾಯನ ಆರ್ಭಟ ಜೋರಾಗಿದ್ದು ಹಲವೆಡೆ ಪ್ರಕೃತಿ ವಿಕೋಪಗಳು ಉಂಟಾಗುತ್ತಿದ್ದು, ನದಿಗಳು ಕೂಡ ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿತ್ತು.