ಕೋಲಾರ, ಏ 26: ಕೋಲಾರ ಜಿಲ್ಲೆಯ ಮುಳಬಾಗಿಲು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೊತ್ತೂರು ಜಿ.ಮಂಜುನಾಥ್ ಅವರ ನಾಮಪತ್ರ ತಿರಸ್ಕೃತಗೊಂಡಿದೆ. ಇದರಿಂದ ಮತದಾನಕ್ಕೆ ಮುನ್ನವೇ ಕಾಂಗ್ರೆಸ್ ಗೆ ತೀವ್ರ ಹಿನ್ನಡೆಯಾದಂತಾಗಿದೆ.
2013ರ ಚುನಾವಣೆ ಸಂದರ್ಭದಲ್ಲಿಯೇ ಸಲ್ಲಿಸಿದ್ದ ಜಾತಿ ಪ್ರಮಾಣಪತ್ರ ನಕಲು ಎಂದು ಆರೋಪಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಏ. 26 ರ ಬುಧವಾರ ನ್ಯಾಯತೀರ್ಪು ಪ್ರಕಟಿಸಿ ಕೊತ್ತೂರು ಜಿ.ಮಂಜುನಾಥ್ ಜಾತಿ ಪ್ರಮಾಣಪತ್ರವನ್ನು ಅಸಿಂಧುಗೊಳಿಸಿ ಆದೇಶಿಸಿತ್ತು.
ನ್ಯಾಯಾಲಯದ ಆದೇಶ ಪ್ರತಿ ಆಯೋಗಕ್ಕೂ ದೊರಕ್ಕಿದ್ದು, ಈ ಹಿನ್ನಲೆಯಲ್ಲಿ ಮಂಜುನಾಥ್ ಅವರ ನಾಮಪತ್ರವನ್ನು ಅಸಿಂಧುಗೊಳಿಸಿ ಚುನಾವಣಾ ಆಯೋಗ ಆದೇಶ ನೀಡಿದೆ.
ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ನಾಮಪತ್ರ ಅಂಗೀಕಾರದದ ನಿರ್ಣಯವನ್ನು ಗುರುವಾರಕ್ಕೆ ಕಾಯ್ದಿರಿಸಿ , ನಾಮಪತ್ರ ಪರಿಶೀಲನೆ ವೇಳೆ ಅಭ್ಯರ್ಥಿ ಹಾಜರಿರಬೇಕೆಂದು ಆಯೋಗ ಸೂಚನೆ ನೀಡಿತ್ತು. ಅಯೋಗದ ಈ ನಿರ್ಧಾರದಿಂದ ಮತದಾನಕ್ಕೆ ಮುನ್ನವೇ ಕಾಂಗ್ರೆಸ್ ಗೆ ಮುಖಭಂಗವಾದಂತಾಗಿದೆ.