ಬೆಂಗಳೂರು, ಏ 26: ಮೇ 12ರಂದು ರಾಜ್ಯ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ , ಮೇ 11 ಮತ್ತು 12ರಂದು ರಾಜ್ಯದ ಎಲ್ಲಾ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಚುನಾವಣೆ ಕೆಲಸಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಉಪನ್ಯಾಸಕರು ಪಾಲ್ಗೊಳ್ಳುವುದರಿಂದ ಮತ್ತು ಪದವಿ ಪೂರ್ವ ಕಾಲೇಜುಗಳನ್ನು ಮತಗಟ್ಟೆಗಳಾಗಿ ಬಳಸಲಾಗುತ್ತದೆ. ಹೀಗಾಗಿ ಮೇ 11 ಮತ್ತು 12ರಂದು ರಾಜ್ಯದ ಎಲ್ಲಾ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಸಾರಿ, ರಾಜ್ಯ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ಆದೇಶ ಪ್ರಕಟಿಸಿದ್ದಾರೆ.