ಮಂಗಳೂರು, ಜು. 14 (DaijiworldNews/SM): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರದಂದು ಮತ್ತೆ 307 ಮಂದಿಗೆ ಸೋಂಕು ದೃಢಪಟ್ಟಿದೆ. ಈ ನಡುವೆ ಆಗಸ್ಟ್ 14ರ ಶುಕ್ರವಾರದಂದು 242 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.

ಇಂದಿನ ಸೋಂಕಿತರ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 8378ಕ್ಕೆ ಏರಿಕೆಯಾಗಿದೆ. ಸದ್ಯ ಜಿಲ್ಲೆಯಲ್ಲಿ 2007 ಕೊರೊನಾ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದಿನ ತನಕ ಜಿಲ್ಲೆಯಲ್ಲಿ ಒಟ್ಟು 6115 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
ಶುಕ್ರವಾರದಂದು ಮತ್ತೆ 6 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದು, ಜಿಲ್ಲೆಯಲ್ಲಿ ಒಟ್ಟು ಸಾವಿನ ಸಂಖ್ಯೆ 256ಕ್ಕೆ ಏರಿಕೆಯಾಗಿದೆ.
ಇಂದು ಸೋಂಕು ಪತ್ತೆಯಾದವರ ಪೈಕಿ ಪ್ರಾಥಮಿಕ ಸಂಪರ್ಕದಿಂದ 44 ಮಂದಿಗೆ ಸೋಂಕು ಪತ್ತೆಯಾಗಿದೆ. 130 ಐಎಲ್ಐ ಪ್ರಕರಣಗಳಾಗಿದ್ದು, 9 ಸಾರಿ ಪ್ರಕರಣಗಳಾಗಿವೆ. 124 ಮಂದಿಯ ಸೋಂಕಿನ ಮೂಲ ಪತ್ತೆ ಹಚ್ಚಲಾಗುತ್ತಿದೆ.