ಮಂಗಳೂರು, ಆ. 15 (DaijiworldNews/MB) : ಶ್ರೀನಗರದ ಲಾಲ್ಚೌಕ್ನಲ್ಲಿ ತ್ರಿವರ್ಣ ಧ್ವಜ ಹಾರಾಡಲು ಮೋದಿ ಸರ್ಕಾರದ ದಿಟ್ಟ ಕ್ರಮ ಕಾರಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ''ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ಸದೃಡ ಆಡಳಿತದಲ್ಲಿ ನವ ಕಾಶ್ಮೀರ. ಜಮ್ಮು ಮತ್ತು ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದು ಮಾಡಿ ಐತಿಹಾಸಿಕ ನಿರ್ಣಯ ಕೈಗೊಂಡ ಮೋದಿಜೀ ನೇತೃತ್ವದ ಬಿಜೆಪಿ ಸರ್ಕಾರದ ದಿಟ್ಟ ಕ್ರಮದಿಂದಾಗಿ ಇಂದು ಶ್ರೀನಗರದ ಲಾಲ್ ಚೌಕ್ ಲ್ಲಿ ನಮ್ಮ ತ್ರಿವರ್ಣ ಧ್ವಜ ಹಾರಾಡುತ್ತಿದೆ'' ಎಂದು ಹೇಳಿದ್ದಾರೆ.
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಆರ್ಟಿಕಲ್ 370 ಅನ್ನು 2019ರ ಆಗಸ್ಟ್ 5 ರಂದು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರದ್ದು ಮಾಡಿದ್ದು ಅಕ್ಟೋಬರ್ 31ರಂದು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಿತ್ತು.