ಉಡುಪಿ, ಆ. 15 (DaijiworldNews/MB) : ಹಲವು ಮಂದಿ ಮಹನೀಯರ ತ್ಯಾಗ ಬಲಿದಾನದಿಂದ ದೇಶಕ್ಕೆ ದೊರೆತಿರುವ ಸ್ವಾತಂತ್ಯ್ರವನ್ನು, ಪ್ರಸ್ತುತ ನಮ್ಮ ಸೇನಾಪಡೆಗಳ ವೀರ ಯೋಧರು ರಕ್ಷಿಸುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು.






ಅವರು ಶನಿವಾರ, ಸ್ವಾತಂತ್ಯ್ರ ದಿನಾಚರಣೆ ಪ್ರಯುಕ್ತ, ಅಜ್ಜರಕಾಡು ನಲ್ಲಿನ ಹುತಾತ್ಮರ ಸ್ಮಾರಕಕ್ಕೆ ಗೌರವ ಸಲ್ಲಿಸಿ ಮಾತನಾಡಿದರು.
ಅಧಿಕಾರಿಗಳು ಮತ್ತು ಯೋಧರು ದೇಶದ ಅಭಿವೃಧ್ದಿಗಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ನಿವೃತ್ತ ಯೋಧರು ಜಿಲ್ಲೆಯ ಅಭಿವೃಧಿಗೆ ಪೂರಕವಾದ ಸಲಹೆ ಸೂಚನೆಗಳನ್ನು ನೀಡುವ ಮೂಲಕ ಅಭಿವೃಧ್ದಿಗೆ ಜಿಲ್ಲಾಡಳಿತದೊಂದಿಗೆ ಕೈ ಜೋಡಿಸುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.
ಕಾರ್ಯಕ್ರಮದಲ್ಲಿ ಶಾಸಕ ರಘುಪತಿ ಭಟ್, ಎಸ್ಪಿ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ತಹಸೀಲ್ದಾರ್ ಪ್ರದೀಪ್ ಕುರ್ಡೇಕರ್, ಜಿಲ್ಲೆಯ ನಿವೃತ್ತ ಯೋಧರು ಉಪಸ್ಥಿತರಿದ್ದರು.
ಉಡುಪಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ನಡೆದ ಸ್ವಾತಂತ್ಯ್ರೋತ್ಸವದ ಕಾರ್ಯಕ್ರಮದಲ್ಲಿ, ಜಿಲ್ಲಾ ವಾರ್ತಾಧಿಕಾರಿ ಬಿ. ಮಂಜುನಾಥ್ ಧ್ವಜಾರೋಹಣ ನೆರವೇರಿಸಿದರು. ಸಿಬ್ಬಂದಿಗಳು ಉಪಸ್ಥಿತರಿದ್ದರು.
ಅಜ್ಜರಕಾಡು ಲೋಕೋಪಯೋಗಿ ವಸತಿಗೃಹದ ಆವರಣದಲ್ಲಿ ನಡದ ಸ್ವಾತಂತ್ಯ್ರೋತ್ಸವದ ಕಾರ್ಯಕ್ರಮದಲ್ಲಿ,ಲೋಕೋಪಯೋಗಿ ಇಲಾಖೆ ಉಡುಪಿ ಉಪ ವಿಭಾಗದ, ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ ಜಗದೀಶ್ ಭಟ್ ಧ್ವಜಾರೋಹಣ ನೆರವೇರಿಸಿದರು. ವಸತಿಗೃಹದ ನಿವಾಸಿಗಳು ಉಪಸ್ಥಿತರಿದ್ದರು.