ಮಂಗಳೂರು, ಆ 16 (DaijiworldNews/PY): ಬೈಕ್ವೊಂದು ಡಿವೈಡರ್ಗೆ ಡಿಕ್ಕಿ ಹೊಡೆದು ಬೈಕ್ ಸವಾರನೋರ್ವ ಪವಾಡಸದೃಶವಾಗಿ ಪಾರಾದ ಘಟನೆ ಬೊಂದೇಲ್ನಲ್ಲಿ ನಡೆದಿದೆ.







ಸ್ಕೂಟಿ ಸವಾರರೋರ್ವ ರೋಡ್ ಕ್ರಾಸ್ ಮಾಡಲು ಮುಂದಾದ ಸಂದರ್ಭ ವಿರುದ್ದ ದಿಕ್ಕಿನಲ್ಲಿ ಬಂದ ಬೈಕ್ ಅನ್ನು ಕಂಡು ನಡು ರಸ್ತೆಯಲ್ಲಿಯೇ ನಿಲ್ಲಿಸಿದ್ದಾರೆ. ಈ ವೇಳೆ ವೇಗವಾಗಿ ಬರುತ್ತಿದ್ದ ಬೈಕ್ ನಿಯಂತ್ರಣಕ್ಕೆ ಸಿಗದೇ ಸ್ಕೂಟಿಗೆ ಡಿಕ್ಕಿ ಹೊಡೆದು ಬಳಿಕ ಡಿವೈಡರ್ಗೆ ಡಿಕ್ಕಿಯಾಗಿದೆ. ಪರಿಣಾಮ ಬೈಕ್ ಸವಾರ ರಸ್ತೆಗೆ ಎಸೆಲ್ಪಟ್ಟಿದ್ದು ಪವಾಡಸದೃಶವಾಗಿ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾನೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಘಟನಾ ಸ್ಥಳಕ್ಕೆ ಟ್ರಾಫಿಕ್ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.