ಉಡುಪಿ, ಆ. 16 (DaijiworldNews/MB) : ಕೇರಳದ ನೋಂದಾಯಿತ ಡಸ್ಟರ್ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿರುವ ಘಟನೆ ಭಾನುವಾರ ರಾತ್ರಿ ಮಣಿಪಾಲದಲ್ಲಿ ನಡೆದಿದೆ.




ಚಾಲಕನಿಗೆ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದ್ದು ಯಾವುದೇ ಪ್ರಾಣ ಹಾನಿ ಸಂಭವಿಸಿರುವ ಬಗ್ಗೆ ವರದಿಯಾಗಿಲ್ಲ.
ಮಣಿಪಾಲದಿಂದ ಉಡುಪಿ ಕಡೆಗೆ ಸಂಚಾರ ಮಾಡುತ್ತಿದ್ದ ಸಂದರ್ಭದಲ್ಲಿ ಮಣಿಪಾಲ ಪೊಲೀಸ್ ಠಾಣೆಯ ಬದಿಯ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ.
ಚಾಲಕನನ್ನು ಪ್ರಥಮ ಚಿಕಿತ್ಸೆ ನೀಡಲಾಗಿದ್ದು ಯಾವುದೇ ಸಾವು ಸಂಭವಿಸಿರುವ ಬಗ್ಗೆ ವರದಿಯಾಗಿಲ್ಲ.