ಉಡುಪಿ, ಆ. 17 (DaijiworldNews/MB) : ಕುಂದಾಪುರ ತಾಲೂಕಿನ ಬಸ್ರೂರು ಗ್ರಾಮದ ಪಾನಕದಕಟ್ಟೆ ಎಂಬಲ್ಲಿರುವ ಈಟ್ ರಿಪೀಟ್ ಎಂಬ ಕಬಾಬ್ ಅಂಗಡಿಯಲ್ಲಿ ಅಕ್ರಮವಾಗಿ ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡಲು ಇರಿಸಿದ್ದು ಪೊಲೀಸರು 1 ಕೆ.ಜಿ. 50 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆದು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರನ್ನು ಕಾವ್ರಾಡಿ ಗ್ರಾಮದ ಮಹ್ಮದ್ ತನ್ವೀರ್ (36) ಹಾಗೂ ಕಾವ್ರಾಡಿಯ ಜನತಾ ಕಾಲೋನಿಯ ಸಬೀಬ್ (25) ಎಂದು ಗುರುತಿಸಲಾಗಿದೆ.
ಆರೋಪಿಗಳಾದ ಮಹ್ಮದ್ ತನ್ವೀರ್ ಹಾಗೂ ಸಬೀಬ್ ಅಂಗಡಿಯಲ್ಲಿ 1 ಕೆ.ಜಿ. 50 ಗ್ರಾಂ ಗಾಂಜಾವನ್ನು ಅಕ್ರಮವಾಗಿ ಮಾರಾಟ ಮಾಡಲು ಇರಿಸಿಕೊಂಡಿದ್ದು ಕಾರ್ಯಾಚರಣೆ ನಡೆಸಿದ ಪೊಲೀಸರು 1 ಕೆ.ಜಿ. 50 ಗ್ರಾಂ ಗಾಂಜಾ ಮತ್ತು 2 ಮೊಬೈಲ್ ಫೋನ್ ವಶಕ್ಕೆ ಪಡೆದಿದ್ದಾರೆ. ಒಟ್ಟು ಸೊತ್ತುಗಳ ಮೌಲ್ಯ ಸುಮಾರು 25,000/- ರೂಪಾಯಿ ಎಂದು ಅಂದಾಜಿಸಲಾಗಿದೆ.
ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ವಿಷ್ಣುವರ್ಧನ್ ಎನ್. ಅವರ ನಿರ್ದೇಶನದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಕುಮಾರ ಚಂದ್ರ ಹಾಗೂ ಕುಂದಾಪುರ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕರಾದ ಹರಿರಾಮ್ ಶಂಕರ್ ರವರ ಮಾರ್ಗದರ್ಶನದಲ್ಲಿ ನಡೆದ ಉಡುಪಿ ಡಿಸಿಐಬಿ ಪೊಲೀಸ್ ಇನ್ಸ್ಪೆಕ್ಟರ್ ಮಂಜಪ್ಪ ಡಿ.ಆರ್. ರವರು ಸಿಬ್ಬಂದಿಗಳೊಂದಿಗೆ ಕಾರ್ಯಚರಣೆ ನಡೆಸಿದ್ದಾರೆ. ಡಿ.ಸಿ.ಐ.ಬಿ ಘಟಕದ ಎಎಸ್ಐ ರವಿಚಂದ್ರ ಹಾಗೂ ಸಿಬ್ಬಂದಿಯವರಾದ ರಾಘವೇಂದ್ರ ಉಪ್ಪುಂದ, ರಾಮು ಹೆಗ್ಡೆ, ಚಂದ್ರ ಶೆಟ್ಟಿ, ಸಂತೋಷ್ ಕುಂದರ್, ಸುರೇಶ, ರಾಜ್ಕುಮಾರ್, ದಯಾನಂದ ಪ್ರಭು, ಶಿವಾನಂದ ಹಾಗೂ ಚಾಲಕ ರಾಘವೇಂದ್ರ ಸಹಕರಿಸಿದ್ದಾರೆ.