ಮಂಗಳೂರು, ಆ. 17 (DaijiworldNews/SM): ದ.ಕ. ಜಿಲ್ಲೆಯಲ್ಲಿ ಸೋಮವಾರದಂದು 144 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಆ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 9 ಸಾವಿರದ ಗಡಿ ದಾಟಿದೆ. ಈ ನಡುವೆ 209 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.

ಇಂದಿನ ಸೋಂಕಿತರ ಮೂಲಕ ಜಿಲ್ಲೆಯಲ್ಲಿ ಒಟ್ಟು ಪತ್ತೆಯಾದ ಸೋಂಕಿತರ ಸಂಖ್ಯೆ 9022ಕ್ಕೆ ತಲುಪಿದೆ. ಈ ಪೈಕಿ 6654 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಸದ್ಯ 2091 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಜಿಲ್ಲೆಯಲ್ಲಿ ಮತ್ತೆ 8 ಮಂದಿ ಮೃತಪಟ್ಟಿದ್ದು, ಒಟ್ಟು ಸಾವಿನ ಸಂಖ್ಯೆ 277ಕ್ಕೆ ತಲುಪಿದೆ