ಉಡುಪಿ, ಆ. 17 (DaijiworldNews/SM): ಜಿಲ್ಲೆಯಲ್ಲಿ ಮತ್ತೆ 270 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಆ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೊಂಕಿತರ ಸಂಖ್ಯೆ 8238ಕ್ಕೆ ಏರಿಕೆಯಾಗಿದೆ.

ಇನ್ನು ಸೋಮವಾರದಂದು ಜಿಲ್ಲೆಯಲ್ಲಿ ಮತ್ತೆ 269 ಮಂದಿ ಗುಣಮುಖರಾಗಿ ಡಿಸ್ವಾರ್ಜ್ ಆಗಿದ್ದಾರೆ. ಈ ನಡುವೆ ಮತ್ತೊಬ್ಬರು ಸೋಮವಾರದಂದು ಸೋಂಕಿಗೆ ಬಲಿಯಾಗಿದ್ದಾರೆ. ಉಡುಪಿಯಲ್ಲಿ 56 ವರ್ಷದ ವ್ಯಕ್ತಿ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಇನ್ನು ಸೋಮವಾರದಂದು ಪತ್ತೆಯಾದ ಸೋಂಕಿತರ ಪೈಕಿ 86 ಲಕ್ಷಣ ಇರುವ ಸೊಂಕಿತರಾಗಿದ್ದು, 184 ಮಂದಿ ಲಕ್ಷಣ ರಹಿತ ಸೊಂಕಿತರಾಗಿದ್ದಾರೆ.