ಉಡುಪಿ, ಆ. 17 (DaijiworldNews/SM): ಕೊರೊನಾ ಪರೀಕ್ಷೆ ವಿಚಾರಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲಾಧಿಕಾರಿಗಳು ಮತ್ತೊಂದು ಉಪಯುಕ್ತ ಮಾಹಿತಿಯೊಂದನ್ನು ಹಂಚಿಕೊಂಡಿದ್ದಾರೆ.

ಕೊರೊನಾ ಪರೀಕ್ಷೆ ನಡೆಸಿದ ಬಳಿಕ ಪರೀಕ್ಷಾ ವರದಿ ಪಾಸಿಟಿವ್ ಬಂದಲ್ಲಿ ಜಿಲ್ಲಾಡಳಿತದ ಕಂಟ್ರೋಲ್ ರೂಂನಿಂದ ಕರೆ ಬರುತ್ತದೆ. ಅವರಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂಬ ಆರೋಪಗಳು ಕೇಳಿಬರುತ್ತಿದೆ. ಅಂತಹವರು ಹೋಂ ಐಸೋಲೇಷನ್ ಅಥವಾ ಆಸ್ಪತ್ರೆಗೆ ದಾಖಲಾಗುವುದೇ ಎಂಬ ಬಗ್ಗೆ ಮಾಹಿತಿ ನೀಡಬೇಕು. ಆಸ್ಪತ್ರೆಗೆ ದಾಖಲಾಗುವುದಾದಲ್ಲಿ ಇಲಾಖೆಯ ವಾಹನದಲ್ಲಿ ತಕ್ಷಣ ತೆರಳಬೇಕು ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.
ಇನ್ನು ಯಾರಿಗೆಲ್ಲ ಪಾಸಿಟಿವ್ ಬರುತ್ತದೆ ಅಂತಹವರು ತಮ್ಮ ಪ್ರಾಥಮಿಕ ಸಂಪರ್ಕದ ಮಾಹಿತಿಯನ್ನು ನೀಡಬೇಕು. ಪ್ರಾಥಮಿಕ ಸಂಪರ್ಕದ ಸುಮಾರು ಐವತ್ತರಷ್ಟು ಮಂದಿಯಲ್ಲಿ ಸೋಂಕು ಪತ್ತೆಯಾಗುತ್ತಿದೆ. ಈ ಹಿನ್ನೆಲೆ ಪ್ರಾಥಮಿಕ ಸಂಪರ್ಕದ ಮಾಹಿತಿ ನೀಡುವುದು ಅಗತ್ಯವಾಗಿದೆ. ತಪ್ಪಿದ್ದಲ್ಲಿ ಅಂತಹರವ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಎಚ್ಚರಿಕೆ ನೀಡಿದ್ದಾರೆ.