ಉಡುಪಿ, ಆ. 18, (DaijiworldNews/SM): ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಹೆಚ್ಚಳವಾಗುತ್ತಿದ್ದು ಇಂದು ಒಂದೇ ದಿನ ಬರೋಬ್ಬರಿ 421 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.

ಇಂದಿನ ಸೋಂಕಿತರ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೊಂಕಿತರ ಸಂಖ್ಯೆ 8659 ಕ್ಕೆ ಏರಿಕೆಯಾಗಿದೆ. ಮಂಗಳವಾರ ಪತ್ತೆಯಾದ ಪ್ರಕರಣಗಳ ಪೈಕಿ 142 ಮಂದಿಯಲ್ಲಿ ಮಾತ್ರ ರೋಗ ಲಕ್ಷಣಗಳು ಪತ್ತೆಯಾಗಿವೆ. ಇನ್ನು ಪ್ರಾಥಮಿಕ ಸಂಪರ್ಕದಿಂದ 150 ಮಂದಿಯಲ್ಲಿ ಸೊಂಕು ಪತ್ತೆಯಾಗಿದೆ. 90 ಸಾರಿ ಪ್ರಕರಣ ಪ್ರಕರಣಗಳು ದೃಢಪಟ್ಟಿವೆ. ಅಂತರ್ ರಾಜ್ಯ ಪ್ರಯಾಣ ಮುಗಿಸಿ ಬಂದ 6 ಮಂದಿಯಲ್ಲಿ ಸೊಂಕು ಪತ್ತೆಯಾಗಿದೆ. 158 ಮಂದಿಯ ಸೊಂಕಿನ ಮೂಲ ಪತ್ತೆಯಾಗಿಲ್ಲ.
ಈ ನಡುವೆ ಗುರುವಾರದಂದು ಜಿಲ್ಲೆಯಲ್ಲಿ 321 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ.