ಬೆಳ್ತಂಗಡಿ, ಆ 19 (DaijiworldNews/HR): ಕಾರು ನಿಲ್ಲಿಸಿ ವ್ಯಕ್ತಿಯೊಬ್ಬ ವಿಷ ಸೇವಿಸಿ ಮೃತಪಟ್ಟಿರುವ ಘಟನೆ ಚಾರ್ಮಾಡಿ ಘಾಟ್ ನಲ್ಲಿ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಮಲೆಯಮಾರುತ ಬಳಿ ಈ ಘಟನೆ ನಡೆದಿದ್ದು, ವಿಷ ಸೇವಿಸಿದ ಪರಿಣಾಮ ವ್ಯಕ್ತಿಯೊಬ್ಬ ಕಾರಿನಲ್ಲೇ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.
KA-05-MT-4877 ನಂಬರ್ ನ ಕ್ವಿಡ್ ಕಾರು ನಿನ್ನೆ ಸಂಜೆಯಿಂದ ಚಾರ್ಮಾಡಿ ಘಾಟ್ ರಸ್ತೆ ಬದಿ ನಿಂತಿದ್ದು, ಅದೇ ಕಾರಿನಲ್ಲಿ ವಿಷ ಸೇವಿಸಿದ್ದಾನೆ ಎನ್ನಲಾಗಿದ್ದು, ಮೃತಪಟ್ಟವರ ಗುರುತು ಪತ್ತೆಯಾಗಿಲ್ಲ.
ವಿಷದ ಬಾಟಲಿ ಕಾರಿನ ಪಕ್ಕದ ರಸ್ತೆಯಲ್ಲಿ ಪತ್ತೆಯಾಗಿದ್ದು, ಸ್ಥಳಕ್ಕೆ ಬಣಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.