ಉಡುಪಿ, ಆ. 19, (DaijiworldNews/SM): ಜಿಲ್ಲೆಯಲ್ಲಿ ಬುಧವಾರದಂದು 375 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಆ ಮೂಲಕ ಜಿಲ್ಲೆಯಲ್ಲಿ ಒಟ್ಟು ಪತ್ತೆಯಾದ ಸೋಂಕಿತರ ಸಂಖ್ಯೆ 9034 ಕ್ಕೆ ಏರಿಕೆಯಾಗಿದೆ.

ಇಂದು ಪತ್ತೆಯಾದ ಸೋಂಕಿತರ ಪೈಕಿ 99 ಮಂದಿಯಲ್ಲಿ ಲಕ್ಷಣ ಸಹಿತ ಸೊಂಕು ಪತ್ತೆಯಾಗಿದೆ. ಇನ್ನು ಪ್ರಾಥಮಿಕ ಸಂಪರ್ಕದಿಂದ 205 ಮಂದಿಯಲ್ಲಿ ಸೊಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಇಂದು 5 ಸಾರಿ ಪ್ರಕರಣಗಳು ಪತ್ತೆಯಾಗಿವೆ.ಅಂತರ್ ರಾಜ್ಯ ಪ್ರಯಾಣ ಮುಗಿಸಿ ಬಂದ 5 ಮಂದಿಯಲ್ಲಿ ಸೊಂಕು ಪತ್ತೆಯಾಗಿದೆ.
ಇನ್ನೂ 93 ಮಂದಿಯ ಸೊಂಕಿನ ಮೂಲ ಪತ್ತೆಯಾಗಿಲ್ಲ. ಇಂದು ಜಿಲ್ಲೆಯಲ್ಲಿ 181 ಮಂದಿ ಗುಣಮುಖರಾಗಿ ಡಿಸ್ವಾರ್ಜ್ ಆಗಿದ್ದಾರೆ. ಇಂದು ಯಾವುದೇ ಕೊವಿಡ್ ನಿಂದ ಮೃತಪಟ್ಟ ವರದಿಯಾಗಿಲ್ಲ.