ಉಡುಪಿ, ಆ. 20 (DaijiworldNews/SM): ಗಣೇಶೋತ್ಸವ ಆಚರಣೆ ಕುರಿತು ರಾಜ್ಯ ಸರ್ಕಾರ ನೀಡಿರುವ ಪರಿಸ್ಕೃತ ಮಾರ್ಗಸೂಚಿಗಳನ್ನು ಪಾಲಿಸುದರೊಂದಿಗೆ ಸರಳವಾಗಿ ಗಣೇಶೋತ್ಸವ ಆಚರಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ತಿಳಿಸಿದರು.

ಅವರು ಗುರುವಾರದಂದು ನಗರದ ಜಿಲ್ಲಾ ಪಂಚಾಯತ್ ನ ಡಾ.ವಿ.ಎಸ್. ಆಚಾರ್ಯ ಸಂಭಾಂಗಣದಲ್ಲಿ ಗಣೇಶ ಹಬ್ಬ ಆಚರಣೆ ಪ್ರಯುಕ್ತ ನಾಗರಿಕ ಸಂವರ್ಧಿತ ಸಭೆಯ ಆದ್ಯಕ್ಷತೆ ವಹಿಸಿ ಮಾತನಾಡಿದರು. ವಿಶ್ವದ ಎಲ್ಲೆಡೆ ಈ ಭಾರಿ ಕೋವಿಡ್ ಸೋಂಕು ಹರಡಿ ಜನರಲ್ಲಿ ಭಯ ಭೀತಿಯನ್ನು ಉಂಟುಮಾಡಿದೆ. ಸೊಂಕು ಹರಡುದನ್ನು ನಿಯಂತ್ರಿಸುವ ಉದ್ದೇಶದಿಂದ ಸರ್ಕಾರ ಗಣೇಶೋತ್ಸವ ಆಚರಣೆ ಕುರಿತು ಮಾರ್ಗಸೂಚಿಯನ್ನು ಹೊರಡಿಸಿದೆ. ಸಾರ್ವಜನಿಕರು ಮಾರ್ಗ ಸೂಚಿಯನ್ನು ಅನುಸರಿಸವುದರೊಂದಿಗೆ ಸರಳವಾಗಿ ಶೃದ್ದ ಭಕ್ತಿಯಿಂದ ಆಚರಿಸಬೇಕು ಎಂದರು.
ಗಣೇಶ ಚತುರ್ಥಿ ಆಚರಿಸುವ ದೇವಸ್ಥಾನ ಸಾರ್ವಜನಿಕ ಸ್ಥಳದಲ್ಲಿ ದಿನನಿತ್ಯದ ಸ್ಯಾನಿಟೈಝೇಷನ್ ಮಾಡುವುದು, ದರ್ಶನಕ್ಕಾಗಿ ಆಗಮಿಸುವ ಭಕ್ತಧಿಗಳು 6 ಆಡಿ ಸಾಮಾಜಿಕ ಆಂತರ ಕಾಯ್ದುಕೊಳ್ಳಬೇಕು. ಅಲ್ಲದೆ ಥರ್ಮಲ್ ಸ್ಕ್ರಿನಿಂಗ್ ಮಾಡಬೇಕು. ಭಕ್ತರು ಕಡ್ಡಾಯವಾಗಿ ಮಾಸ್ಕ್ ಗಳನ್ನು ಧರಿಸಬೇಕು ಎಂದರು. ಗಣೇಶ ಮೂರ್ತಿ ಪ್ರತಿಷ್ಟಾನ ಸ್ಥಳದಲ್ಲಿ ಯಾವುದೇ ರೀತಿಯ ಸಾಂಸ್ಕೃತಿಕ, ಸಂಗೀತ, ನೃತ್ಯ, ಇನ್ನಿತರೆ ಯಾವುದೆ ಮನೋರಂಜನೆ ಕಾರ್ಯಕ್ರಮಗಳನ್ನು ಆಯೋಜಿಸುದಕ್ಕೆ ಅವಕಾಶ ಇರುವುದಿಲ್ಲ. ಗಣೇಶ ಮೂರ್ತಿಗಳನ್ನು ತರುವಾಗ ಹಾಗೂ ವಿಸರ್ಜಿಸುವಾಗ ಯಾವುದೇ ರೀತಿಯ ಮೆರವಣಿಗೆ ಮಾಡುವುದನ್ನು ನಿರ್ಬಂಧಿಸಲಾಗಿದೆ ಎಂದವರು ತಿಳಿಸಿದರು.
ಪಾರಂಪಾರಿಕ ಗಣೇಶೋತ್ಸವಕ್ಕಾಗಿ ಗಣೇಶೋತ್ಸವ ಮಂಡಳಿಗಳು ಗಣೇಶ ಮೂರ್ತಿ ಪ್ರತಿಷ್ಠಾನ ಮಾಡುವ ಮುನ್ನ ಸ್ಥಳೀಯ ಸಂಸ್ಥೆಗಳ ಪೂರ್ವನುಮತಿ ಪಡೆಯಬೇಕು ಎಂದು ಅವರು ಗಣೇಶ ಮೂರ್ತಿ ಪ್ರತಿಷ್ಟಾನದ ಸ್ಥಳದಲ್ಲಿ 20ಕ್ಕಿಂತ ಹೆಚ್ಚು ಜನರು ಸೇರದಂತೆ ಎಚ್ಚರವಹಿಸಬೇಕು ಎಂದರು.