ಸುಳ್ಯ, ಆ 21 (DaijiworldNews/PY): ಇಲ್ಲಿನ ಕೆವಿಜಿ ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಯುವಕನೊರ್ವ ಹಾರಿ ಪ್ರಾಣ ಕಳೆದುಕೊಂಡಿರುವ ಘಟನೆ ಆ.20ರ ಗುರುವಾರ ನಡೆದಿದೆ.

ಮೃತ ಯುವಕನನ್ನು ಕೊಲ್ಲಮೊಗ್ರ ನಿವಾಸಿ ಸತ್ತಾರ್ (35) ಎಂದು ಗುರುತಿಸಲಾಗಿದೆ.
ಸತ್ತಾರ್ ಅವರು ಮಾನಸಿಕ ಅಸ್ವಸ್ಥರಾಗಿದ್ದು, ಎರಡು ದಿನಗಳ ಹಿಂದೆ ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಸಂಜೆ ಸುಮಾರು 4.30ರ ಸುಮಾರಿಗೆ ಅವರು ಇದ್ದಕ್ಕಿಂದತೆ ಕಟ್ಟಡ ನಾಲ್ಕನೇ ಮಹಡಿಯಿಂದ ಹಾರಿದ್ದಾರೆ ಎಂದು ಹೇಳಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಅವರನ್ನು ತಕ್ಷಣ ಆಸ್ಪತ್ರೆಯೊಳಕ್ಕೆ ಕರೆದೊಯ್ದು ಚಿಕಿತ್ಸೆ ನೀಡಲಾಯಿತ್ತಾದರೂ ಆ ವೇಳೆ ಅವರು ಸಾವನ್ನಪ್ಪಿದ್ದಾರೆ.
ಘಟನೆಯ ಬಗ್ಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.