ಮಂಗಳೂರು, ಆ. 24(DaijiworldNews/HR): ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಬೆಳಂಗಡಿ ಶಾಸಕ ಹರೀಶ್ ಪೂಂಜ ಅವರ ಕಚೇರಿಗೆ ಮುತ್ತಿಗೆಹಾಕಿ ಪ್ರವಾಹ ಪರಿಹಾರದ ಲೆಕ್ಕ ತೋರಿಸಬೇಕೆಂದು ಒತ್ತಾಯಿಸಿದ ಘಟನೆ ಇಂದು ನಡೆದಿದೆ.



ಮಾಜಿ ಶಾಸಕ ವಸಂತ್ ಬಂಗೇರಾ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದ್ದು, ಶಾಸಕರ ಕಚೇರಿಯನ್ನು ಮುತ್ತಿಗೆ ಹಾಕುವ ಪ್ರಯತ್ನದ ವೇಳೆ ವಸಂತ್ ಬಂಗೇರಾ ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದ್ದು, ಶಾಸಕರ ಕಚೇರಿಯ ಗೇಟಿನ ಬಳಿಯೇ ಪ್ರತಿಭಟನಾಕಾರರನ್ನು ಪೊಲೀಸರಿಗೆ ತಡೆದಿದ್ದಾರೆ.
ಪ್ರತಿಭಟನಾಕಾರರು ಮಾಸ್ಕ್ ಗಳನ್ನು ಧರಿಸಿರಲಿಲ್ಲ ಮತ್ತು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದೆ ಪ್ರತಿಭಟನೆ ನಡೆಸಿದ್ದಾರೆ. 15 ದಿನಗಳೊಳಗೆ ಕಾಳಜಿ ರಿಲೀಫ್ ಫಂಡ್ ಲೆಕ್ಕ ಕೊಡದೇ ಇದ್ದರೆ ತೀವ್ರ ಪ್ರತಿಭಟನೆ ನಡೆಸುವುದಾಗಿ ಶಾಸಕರಿಗೆ ಎಚ್ಚರಿಕೆ ನೀಡಿದ್ದಾರೆ.
ಕಳೆದ ವರ್ಷ ಹರೀಶ್ ಪೂಂಜಾ ನೇತೃತ್ವದಲ್ಲಿ ಪ್ರವಾಹದ ಸಂದರ್ಭದಲ್ಲಿ ನಿಧಿಯನ್ನು ಸ್ಥಾಪನೆ ಮಾಡಲಾಗಿತ್ತು.