ಮಂಗಳೂರು, ಆ.24 (DaijiworldNews/SM): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 201 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಆ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 10531ಕ್ಕೆ ಏರಿಕೆಯಾಗಿದೆ.

ಇಂದು ಪತ್ತೆಯಾದ ಸೋಂಕಿತರ ಪೈಕಿ ಪ್ರಾಥಮಿಕ ಸಂಪರ್ಕದಿಂದ 49 ಮಂದಿಗೆ ಸೋಂಕು ತಗುಲಿದೆ. 70 ಐಎಲ್ಐ ಪ್ರಕರಣಗಳಾಗಿವೆ. 9 ಸಾರಿ ಪ್ರಕರಣಗಳು ದೃಢಪಟ್ಟಿವೆ. 72 ಮಂದಿಯ ಸೋಂಕಿನ ಮೂಲ ಪತ್ತೆ ಹಚ್ಚಲಾಗುತ್ತಿದೆ. ಅಂತರ್ ರಾಜ್ಯ ಪ್ರಯಾಣ ಮುಗಿಸಿ ಬಂದ ಓರ್ವ ವ್ಯಕ್ತಿಗೆ ಸೋಂಕು ದೃಢಪಟ್ಟಿದೆ.
ಸದ್ಯ ಜಿಲ್ಲೆಯಲ್ಲಿ 2269 ಕೊರೊನಾ ಸಕ್ರಿಯ ಪ್ರಕರಣಗಳಿವೆ. ಆ.24ರಂದು 241 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 7918 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಆ. 24ರಂದು 6 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದು, ಜಿಲ್ಲೆಯಲ್ಲಿ ಒಟ್ಟು ಸಾವಿನ ಸಂಖ್ಯೆ 316ಕ್ಕೆ ಏರಿಕೆಯಾಗಿದೆ.