ಉಡುಪಿ, ಆ. 25 (DaijiworldNews/SM): ಜಿಲ್ಲೆಯಲ್ಲಿ 217 ಮಂದಿಯಲ್ಲಿ ಮಂಗಳವಾರದಂದು ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಆ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 10446ಕ್ಕೆ ಏರಿಕೆಯಾಗಿದೆ.

ಸದ್ಯ ಉಡುಪಿ ಜಿಲ್ಲೆಯಲ್ಲಿ 2625 ಸಕ್ರಿಯ ಪ್ರಕರಣಗಳಿವೆ. ಜಿಲ್ಲೆಯಲ್ಲಿ ಮತ್ತೆ ಮಂಗಳವಾರ ಕೊರೊನಾಗೆ ಇಬ್ಬರು ಮೃತಪಟ್ಟಿದ್ದಾರೆ. ಆ ಮೂಲಕ ಉಡುಪಿ ಜಿಲ್ಲೆಯಲ್ಲಿ ಮೃತರ ಸಂಖ್ಯೆ 91 ಕ್ಕೆ ಏರಿಕೆಯಾಗಿದೆ. ಉಡುಪಿಯ 87 ವರ್ಷದ ವೃದ್ದ ಕೊರೊನಾಗೆ ಸಾವನ್ನಪ್ಪಿದ್ದಾರೆ. ಕುಂದಾಪುರದ 67 ವರ್ಷದ ವೃದ್ದ ಸೋಂಕಿಗೆ ಬಲಿಯಾಗಿದ್ದಾರೆ.
ಇನ್ನು ಸದ್ಯ ಪ್ರಾಥಮಿಕ ಸಂಪರ್ಕದಿಂದ 82 ಮಂದಿಗೆ ಕೊರೊನಾ ದೃಢಪಟ್ಟಿದೆ. ಮಂಗಳವಾರ ಜಿಲ್ಲೆಯಲ್ಲಿ 69 ಐಎಲ್ಐ, 6 ಸಾರಿ ಕೊರೊನಾ ಪ್ರಕರಣಗಳು ದೃಢಪಟ್ಟಿವೆ. ಅಂತರ್ ರಾಜ್ಯ ಮತ್ತು ಅಂತರಾಷ್ಟ್ರೀಯ ಪ್ರಯಾಣ ಮುಗಿಸಿ ಬಂದ ತಲಾ ಇಬ್ಬರಲ್ಲಿ ಸೋಂಕು ಪತ್ತೆಯಾಗಿದೆ. ಇನ್ನು ೫೮ ಮಂದಿಯ ಸೊಂಕಿನ ಮೂಲವನ್ನು ಪತ್ತೆ ಹಚ್ಚಲಾಗುತ್ತಿದೆ. 895 ಮಂದಿಯ ವರದಿ ಬರಲು ಬಾಕಿಯಿದೆ.