ಮಂಗಳೂರು, ಆ. 25 (DaijiworldNews/SM): ದ.ಕ ಜಿಲ್ಲೆಯಲ್ಲಿ 247 ಮಂದಿಯಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಆ ಮೂಲಕ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 10774ಕ್ಕೆ ಏರಿಕೆಯಾಗಿದೆ.

ಮಂಗಳವಾರದಂದು 218 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಆ ಮೂಲಕ ಇಲ್ಲಿಯ ತನಕ 8136 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದಂತಾಗಿದೆ. ಮಂಗಳವಾರ ಮೂವರು ಕೊರೊನಾ ಸೋಂಕಿನಿಂದಾಗಿ ಸಾವನ್ನಪ್ಪಿದ್ದಾರೆ. ಸದ್ಯ ದ.ಕ ಜಿಲ್ಲೆಯಲ್ಲಿ 2323 ಕೊರೊನಾ ಸಕ್ರಿಯ ಪ್ರಕರಣಗಳಿವೆ.
ಈವರೆಗೆ ಜಿಲ್ಲೆಯಲ್ಲಿ 319 ಮಂದಿ ಕೊರೊನಾಗೆ ಸಾವನ್ನಪ್ಪಿದ್ದಾರೆ. ಪ್ರಾಥಮಿಕ ಸಂಪರ್ಕದಿಂದ 85 ಮಂದಿಗೆ ಕೊರೊನಾ ದೃಢಪಟ್ಟಿದೆ. 72 ಐಎಲ್ಐ ಪ್ರಕರಣಗಳಾಗಿದ್ದು, 11 ಸಾರಿ ಪ್ರಕರಣಗಳಾಗಿವೆ. 78 ಮಂದಿಯ ಸೋಂಕಿನ ಸಂಪರ್ಕ ಪತ್ತೆಹಚ್ಚಲಾಗುತ್ತಿದೆ.