ಕಾಸರಗೋಡು, ಆ. 26 (DaijiworldNews/MB) : ಯುವಕನ ಮೃತದೇಹ ಕೆರೆಯಲ್ಲಿ ಪತ್ತೆಯಾದ ಘಟನೆ ಪೈವಳಿಕೆ ಸಮೀಪದ ಬಾಯಿಕಟ್ಟೆಯಲ್ಲಿ ನಡೆದಿದೆ.

ಬಾಯಿಕಟ್ಟೆಯ ಖಾಸಿಂ ( 28) ಮೃತಪಟ್ಟ ಯುವಕ.
ಮಂಗಳವಾರ ಸಂಜೆ ಬಾಯಿಕಟ್ಟೆ ಸಮೀಪದ ಮಸೀದಿ ಪರಿಸರದ ಕೆರೆಯಲ್ಲಿ ನಿಗೂಢ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.
ಪೈವಳಿಕೆಯ ಚಿಕನ್ ಸ್ಟಾಲ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಖಾಸಿಂ ಸೋಮವಾರ ಬೆಳಿಗ್ಗೆ ಕೆಲಸಕ್ಕೆ ತೆರಳಿದ್ದರು. ಬಳಿಕ ನಾಪತ್ತೆಯಾಗಿದ್ದರು. ಈ ನಡುವೆ ಇಂದು ಸಂಜೆ ಕೆರೆಯಲ್ಲಿ ಮೃತದೇಹ ಪತ್ತೆಯಾಗಿದೆ.
ಸ್ಥಳೀಯರು ಗಮನಿಸಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕಾಗಮಿಸಿದ ಮಂಜೇಶ್ವರ ಪೊಲೀಸರು ಮೃತದೇಹ ಮೇಲಕ್ಕೆತ್ತಿ ಮಹಜರು ನಡೆಸಿದರು.
ಯುವಕನ ಸಾವಿನ ಬಗ್ಗೆ ಕುಟುಂಬಸ್ಥರು ಸಂಶಯ ವ್ಯಕ್ತಪಡಿಸಿದ್ದು, ತನಿಖೆಗೆ ಒತ್ತಾಯಿಸಿದ್ದಾರೆ.