ಮಂಗಳೂರು, ಆ 26 (Daijiworld News/MSP): ನಗರದ ಸೆಂಟ್ರಲ್ ಮಾರ್ಕೆಟ್ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಮೊಹಮದ್ ಮುಸ್ತಫಾ (59) ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನರಾಗಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಹಣ್ಣು ಹಂಪಲು ವ್ಯಾಪಾರಿಯಾಗಿದ್ದ ಅವರು ವ್ಯಾಪಾರಸ್ಥರ ವಲಯದಲ್ಲಿ " ಎಂ.ಎಂ.ಕೆ" ಎಂದು ಜನಪ್ರಿಯರಾಗಿದ್ದರು.
ಜಿಲ್ಲಾಡಳಿತ ಸೆಂಟ್ರಲ್ ಮಾರುಕಟ್ಟೆಯ ತರಕಾರಿ ಹಾಗೂ ಹಣ್ಣುಹಂಪಲು ಸಗಟು ವ್ಯಾಪಾರವನ್ನು ನಗರದ ಹೊರ ವಲಯದ ಬೈಕಂಪಾಡಿಯ ಎಪಿಎಂಸಿ ಪ್ರಾಂಗಣಕ್ಕೆ ಸ್ಥಳಾಂತರಿಸಲು ನಿರ್ಧರಿಸಿದ್ದಾಗ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಮೊಹಮದ್ ಮುಸ್ತಫಾ ಅವರು, ಮುಂದಾಳತ್ವ ವಹಿಸಿ ವ್ಯಾಪಾರಿಗಳ ಪರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿರುವುದು ಸ್ಮರಣೀಯ.