ಮಂಗಳೂರು, ಆ. 27 (DaijiworldNews/SM): ದ.ಕ. ಜಿಲ್ಲೆಯಲ್ಲಿ 297ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಆ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 11389ಕ್ಕೆ ಏರಿಕೆಯಾಗಿದೆ.

ಸದ್ಯ ಜಿಲ್ಲೆಯಲ್ಲಿ 2372 ಮಂದಿ ಕೊರೊನಾಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಇಂದು 257 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 8680 ಕ್ಕೆ ಏರಿಕೆಯಾಗಿದೆ.
ಇನ್ನು ಪ್ರಾಥಮಿಕ ಸಂಪರ್ಕದಿಂದ 61ಮಂದಿಗೆ ಸೋಂಕು ದೃಢಪಟ್ಟಿದೆ. 99 ಐಎಲ್ಐ ಪ್ರಕರಣಗಳಾಗಿದ್ದು, 14 ಸಾರಿ ಪ್ರಕರಣಗಳಾಗಿವೆ. ಈ ನಡುವೆ 123ಮಂದಿಯ ಸೋಂಕಿನ ಮೂಲ ಪತ್ತೆಹಚ್ಚಲಾಗುತ್ತಿದೆ.
ಮಂಗಳೂರಿನಲ್ಲಿ 160, ಬಂಟ್ವಾಳ 36, ಸುಳ್ಯ 42, ಪುತ್ತೂರು 14, ಬೆಳ್ತಂಗಡಿ 21 ಮಂದಿಯಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಆ.27ರಂದು ಕೊರೊನಾ ಸೋಂಕಿಗೆ ಮತ್ತೆ 7 ಮಂದಿ ಬಲಿಯಾಗಿದ್ದು, ಒಟ್ಟು ಕೊರೊನಾಗೆ ಬಲಿಯಾದವರ ಸಂಖ್ಯೆ 337ಕ್ಕೆ ಏರಿಕೆಯಾಗಿದೆ.