ಉಡುಪಿ, ಆ. 27 (DaijiworldNews/SM): ಜಿಲ್ಲೆಯಲ್ಲಿ ಗುರುವಾರದಂದು 209 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಆ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 10906ಕ್ಕೆ ಏರಿಕೆಯಾಗಿದೆ.

ಪ್ರಾಥಮಿಕ ಸಂಪರ್ಕದಿಂದ 78 ಜನರಿಗೆ ಸೋಂಕು ಪತ್ತೆಯಾಗಿದೆ. 62 ಐಎಲ್ಐ ಪ್ರಕರಣಗಳಾಗಿವೆ. 3 ಸಾರಿ ಪ್ರಕರಣ ದೃಢಪಟ್ಟಿದೆ. ಅಂತರ್ ರಾಜ್ಯ ಪ್ರಯಾಣ ಮುಗಿಸಿ ಬಂದ 6 ಮಂದಿಗೆ ಸೋಂಕು ಪತ್ತೆಯಾಗಿದೆ. ಇನ್ನು ಈ ನಡುವೆ 60 ಮಂದಿಯ ಸೋಂಕಿನ ಮೂಲ ಪತ್ತೆ ಹಚ್ಚಲಾಗುತ್ತಿದೆ. ಗುರುವಾರರಂದು ಕೋವಿಡ್ ಸೋಂಕಿಗೆ ಮತ್ತೋರ್ವ ಬಲಿಯಾಗಿದ್ದಾರೆ.