ಮಂಗಳೂರು, ಆ. 27 (DaijiworldNews/SM): ಆದಾಯಕ್ಕಿಂತ ಹೆಚ್ಚು ಆಸ್ತಿಗಳಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸ್ ಇನ್ಸ್ಪೆಕ್ಟರ್ ಒಬ್ಬರಿಗೆ ಕೋರ್ಟ್ ನಾಲ್ಕು ವರ್ಷ ಶಿಕ್ಷೆ ವಿಧಿಸಿದ ಘಟನೆ ನಡೆದಿದೆ. ಕರಾವಳಿ ಕಾವಲು ಪಡೆಯ ವೃತ್ತ ನಿರೀಕ್ಷಕ ಗಂಗಿ ರೆಡ್ಡಿ ಶಿಕ್ಷೆಗೊಳಪಟ್ಟವರಾಗಿದ್ದಾರೆ.

ವೃತ್ತ ನಿರೀಕ್ಷಕ ಗಂಗಿ ರೆಡ್ಡಿಗೆ 4 ವರ್ಷ ಸಾದಾ ಸಜೆ ಜೊತೆಗೆ 5 ಲಕ್ಷ ರೂಪಾಯಿ ದಂಡ ವಿಧಿಸಿ ನ್ಯಾ.ಬಿ.ಬಿ. ಜಕಾತಿ ಆದೇಶ ನೀಡಿದ್ದಾರೆ. 2009ರಲ್ಲಿ ಬೆಳ್ತಂಗಡಿ ಠಾಣೆಯಲ್ಲಿ ವೃತ್ತ ನಿರೀಕ್ಷಕರಾಗಿದ್ದರು.
ಈ ಹಿಂದೆ ಲೋಕಾಯುಕ್ತ ಡಿ.ವೈ.ಎಸ್.ಪಿ ಸದಾನಂದ ವರ್ಣೇಕರ್ ನೇತೃತ್ವದ ತಂಡ ದಾಳಿ ನಡೆಸಿ ದಾಖಲೆ ವಶ ಪಡಿಸಿಕೊಂಡಿತ್ತು. ಈ ವೇಳೆ 19 ಲಕ್ಷದಷ್ಟು ಅಕ್ರಮ ಆಸ್ತಿ ಪತ್ತೆಯಾಗಿತ್ತು.
ಭ್ರಷ್ಟಾಚಾರ ನಿಗ್ರಹ ಖಾಯಿದೆಯಡಿ ಆರೋಪ ಸಾಬೀತಾಗಿತ್ತು. ಬಳಿಕ ಪ್ರಕರಣ ಕೋರ್ಟ್ ಮೆಟ್ಟಿಲೇರಿತ್ತು. ಇದೀಗ ಮಂಗಳೂರಿನ ಮೂರನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ
ಲೋಕಾಯುಕ್ತ ವಿಶೇಷ ನ್ಯಾಯಾಲಯ ಶಿಕ್ಷೆ ವಿಧಿಸಿ ಆದೇಶ ನೀಡಿದೆ.