ಕುಂದಾಪುರ, ಆ. 27 (DaijiworldNews/SM): ಸರಕಾರ ಬಡತನ ರೇಖೆಗಿಂತ ಕೆಳಗಿರುವವರಿಗೆ ಉಚಿತವಾಗಿ ವಿತರಿಸುವ ಅನ್ನಭಾಗ್ಯದ ಅಕ್ಕಿಗೆ ಕನ್ನ ಹಾಕಿದ ಘಟನೆ ಕುಂದಾಪುರ ತಾಲೂಕು ಕೋಟೇಶ್ವರದಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಚೋರರನ್ನು ಬಂಧಿಸಲಾಗಿದೆ.





ಖದೀಮರು ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನಿರಿಸಿದ್ದರು. ಈ ಬಗ್ಗೆ ಮಾಹಿತಿ ಪಡೆದ ಡಿಸಿಐಬಿ ಪೊಲೀಸರು ದಾಳಿ ನಡೆಸಿದ್ದು, ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇಸ್ಮಾಯಿಲ್ ಬ್ಯಾರಿ, ಮುಸ್ತಫಾ ತೌಫಿಕ್, ಉಬೇದುಲ್ಲಾ, ಮಹಮ್ಮದ್ ಮೇಚ್ರಾ, ನಿಯಾಸ್ ಬಂಧಿತ ಆರೋಪಿಗಳಾಗಿದ್ದಾರೆ. ಇನ್ನು ಆರೋಪಿಗಳು ಅಕ್ರಮವಾಗಿ ಗೋದಾಮಿನಲ್ಲಿ ದಾಸ್ತಾನಿರಿಸಿದ್ದ 55 ಟನ್ ಅಕ್ಕಿ ವಶಕ್ಕೆ ಪಡೆಯಲಾಗಿದೆ. ಕಾರ್ಯಾಚರಣೆಯಲ್ಲಿ 2.75 ಲಕ್ಷ ನಗದು ವಶಕ್ಕೆ ಪಡೆಯಲಾಗಿದೆ. ಅಲ್ಲದೆ, ಲಾರಿ ಸೇರಿ ಒಟ್ಟು ಒಂದು ಕೋಟಿ ರುಪಾಯಿ ಸೊತ್ತು ವಶಕ್ಕೆ ಪಡೆಯಲಾಗಿದೆ.
ಸರಕಾರದ ಫ್ರೀ ರೇಶನ್ ಸಂಗ್ರಹಿಸಿ ಕೇರಳಕ್ಕೆ ಅಕ್ರಮವಾಗಿ ಸಾಗ್ಗಾಟ ನಡೆಸುವ ದಂಧೆ ನಡೆಯುತ್ತಿದೆ ಎಂಬ ಆರೋಪ ವ್ಯಕ್ತವಾಗಿದೆ. ಉಚಿತ ಅಕ್ಕಿ ಪಾಲಿಶ್ ಮಾಡಿ ಸೋನ ಮಸೂರಿ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.
ಉಡುಪಿಯ ಡಿಸಿಐಬಿ ಪೊಲೀಸರ ಕಾರ್ಯಾಚರಣೆ ನಡೆಸಿದ್ದಾರೆ.