ಮಂಗಳೂರು, ಆ. 28 (DaijiworldNews/MB) : ತುಳುಭಾಷೆಗೆ ರಾಜ್ಯದಲ್ಲಿ ಮಾನ್ಯತೆ ನೀಡಬೇಕು ಹಾಗೂ ಸಂವಿಧಾನದ 8 ನೇ ಪರಿಚ್ಛೇದದಲ್ಲಿ ಸೇರಿಸಬೇಕೆಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿದೆ.



ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲಸಾರ್ ಅವರು ಇತ್ತೀಚೆಗೆ ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಾ. ಅಶ್ವತ್ಥ ನಾರಾಯಣ, ಶಿಕ್ಷಣ ಸಚಿವ ಸುರೇಶ್ ಕುಮಾರ್, ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ. ರವಿ ಅವರನ್ನು ಭೇಟಿ ಮಾಡಿ ಈ ಬಗ್ಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಅಕಾಡೆಮಿ ಸದಸ್ಯೆ ಕಾಂತಿ ಶೆಟ್ಟಿ ಉಪಸ್ಥಿತರಿದ್ದರು.