ಮಂಗಳೂರು, ಆ. 28 (DaijiworldNews/SM): ದ.ಕ. ಜಿಲ್ಲೆಯಲ್ಲಿ ಶುಕ್ರವಾರ 448 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಆ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 11837ಕ್ಕೆ ಏರಿಕೆಯಾಗಿದೆ.

ಶುಕ್ರವಾರದಂದು 293 ಮಂದಿ ಗುಣಮುಖರಾಗಿ ಅಸ್ಪತ್ರೆಗಳಿಂದ ಬಿಡುಗಡೆಗೊಂದಿದ್ದಾರೆ. ಆ ಮೂಲಕ 8973 ಮಂದಿ ಜಿಲ್ಲೆಯಲ್ಲಿ ಒಟ್ಟು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಂತಾಗಿದೆ. ಪ್ರಸ್ತುತ ಜಿಲ್ಲೆಯ ಆಸ್ಪತ್ರೆಗಳಲ್ಲಿ ಹಾಗೂ ಹೋಂ ಐಸೋಲೇಷನ್ ನಲ್ಲಿ 2521 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಇಂದು ಮತ್ತೆ 6 ಮಂದಿ ಕೊರೊನಾ ಸೋಂಕಿಗೆ ದ.ಕ. ಜಿಲ್ಲೆಯಲ್ಲಿ ಬಲಿಯಾಗಿದ್ದಾರೆ. ಆ ಮೂಲಕ ದ.ಕ. ಜಿಲ್ಲೆಯಲ್ಲಿ ಒಟ್ಟು ಸಾವಿನ ಸಂಖ್ಯೆ 343ಕ್ಕೆ ಏರಿಕೆಯಾಗಿದೆ.
ಇನ್ನು ದ.ಕ. ಜಿಲ್ಲೆಯಲ್ಲಿ ಇಲ್ಲಿಯ ತನಕ 91490 ಮಂದಿಯನ್ನು ಕೋವಿಡ್ ಪರೀಕ್ಷ್ಎಗೆ ಒಳಪಡಿಸಲಾಗಿದೆ. ಈ ಪೈಕಿ 79653 ಮಂದಿಯ ವರದಿ ನೆಗೆಟಿವ್ ಆಗಿದೆ.
ಇನ್ನು ಶುಕ್ರವಾರದಂದು ಪತ್ತೆಯಾದ ಸೋಂಕಿತರ ಪೈಕಿ 66 ಮಂದಿಯಲ್ಲಿ ಸಂಪರ್ಕದಿಂದ ಸೋಂಕು ದೃಢಪಟ್ಟಿದೆ. 149 ಮಂದಿಯಲ್ಲಿ ಐಎಲ್ ಐ ಪ್ರಕರಣ ದೃಢಪಟ್ಟಿದೆ. 17 ಮಂದಿಯಲ್ಲಿ ಸಾರಿ ಪ್ರಕರಣ ಪತ್ತೆಯಾಗಿದೆ. 215 ಮಂದಿಯ ಸೋಂಕಿನ ಮೂಲ ಪತ್ತೆಹಚ್ಚಲಾಗುತ್ತಿದೆ. ವಿದೇಶದಿಂದ ಬಂದ ಒಬ್ಬರಲ್ಲಿ ಸೋಂಕು ಪತ್ತೆಯಾಗಿದೆ.