ಮಂಗಳೂರು, ಆ. 29 (DaijiworldNews/MB) : ''ರಾಜ್ಯದ ಕೆಲವು ದೇವಾಲಯಗಳಲ್ಲಿ ಸೆಪ್ಟೆಂಬರ್ 1 ರಿಂದ ಕೆಲ ಸೇವೆಗಳಿಗೆ ಅವಕಾಶ ನೀಡುವ ಸಾಧ್ಯತೆ ಇದೆ'' ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಶನಿವಾರ ತಿಳಿಸಿದ್ದಾರೆ.

ಈ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿದ ಅವರು,''ಸೆಪ್ಟೆಂಬರ್ 1 ರಿಂದ ದೇವಾಲಯಗಳಲ್ಲಿ ಕೆಲವು ಸೇವೆಗಳಿಗೆ ಅವಕಾಶ ನೀಡುವ ಬಗ್ಗೆ ಮುಜರಾಯಿ ಇಲಾಖೆಯು ಆರೋಗ್ಯ ಇಲಾಖೆಯನ್ನು ಸಂಪರ್ಕಿಸಿದ್ದು ಆರೋಗ್ಯ ಇಲಾಖೆ ಶಿಫಾರಸು ಮಾಡಿದರೆ ಮಾತ್ರ ದೇವಾಲಯಗಳಲ್ಲಿ ಕೆಲವು ಸೇವೆಗಳಿಗೆ ಅವಕಾಶ ನೀಡಲಾಗುತ್ತದೆ. ಆದರೆ ಅನ್ನ ಸಂತರ್ಪಣೆಗೆ ಅವಕಾಶ ನೀಡಲಾಗುವುದಿಲ್ಲ'' ಎಂದು ತಿಳಿಸಿರುವುದಾಗಿ ವರದಿಯಾಗಿದೆ.