ಮಂಗಳೂರು, ಆ. 30 (DaijiworldNews/SM): ದ.ಕ. ಜಿಲ್ಲೆಯಲ್ಲಿ ರವಿವಾರದಂದು ಮತ್ತೆ 334 ಮಂದಿಯಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಆ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 12443ಕ್ಕೆ ಏರಿಕೆಯಾಗಿದೆ.

ರವಿವಾರ ಮತ್ತೆ 213 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಆ ಮೂಲಕ ಒಟ್ಟು ಗುಣಮುಖರಾಗಿ ಬಿಡುಗಡೆಯಾದವರ ಸಂಖ್ಯೆ 9422ಕ್ಕೆ ಏರಿಕೆಯಾಗಿದೆ. ಇನ್ನು 2665 ಮಂದಿ ಜಿಲ್ಲೆಯಲ್ಲಿ ಸದ್ಯ ಚಿಕಿತ್ಸೆಯಲ್ಲಿದ್ದಾರೆ. ಜಿಲ್ಲೆಯಲ್ಲಿ ಆ. 30ರಂದು ಮತ್ತೆ 6 ಮಂದಿ ಕೊರೊನಾಗೆ ಬಲಿಯಾಗಿದ್ದು, ಜಿಲ್ಲೆಯಲ್ಲಿ ಒಟ್ಟು ಸಾವಿನ ಸಂಖ್ಯೆ 356ಕ್ಕೆ ಏರಿಕೆಯಾಗಿದೆ.
ಇನ್ನು ಜಿಲ್ಲೆಯಲ್ಲಿ 82770 ಇಲ್ಲಿಯ ತನಕ ದೃಢಪಟ್ಟ ನೆಗೆಟಿವ್ ಪ್ರಕರಣಗಳಾಗಿವೆ.