ಮಂಗಳೂರು, ಆ 31 (DaijiworldNews/SM): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 270 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಆ ಮೂಲಕ ದ.ಕ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 12713ಕ್ಕೆ ಏರಿಕೆಯಾಗಿದೆ.

ಆಗಸ್ಟ್ 31ರಂದು 367 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಆ ಮೂಲಕ ಜಿಲ್ಲೆಯಲ್ಲಿ ಒಟ್ಟು ಗುಣಮುಖರಾದವರ ಸಂಖ್ಯೆ 9789 ಮಂದಿ ಗುಣಮುಖರಾಗಿ ಬಿಡುಗಡೆಯಾದಂತಾಗಿದೆ. ಸದ್ಯ ಜಿಲ್ಲೆಯಲ್ಲಿ 2556 ಕೊರೊನಾ ಆಕ್ಟಿವ್ ಪ್ರಕರಣಗಳಿವೆ.
ಇನ್ನು ಸೋಮವಾರದಂದು ಮತ್ತೆ 12 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಆ ಮೂಲಕ ದ.ಕ. ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 368ಕ್ಕೆ ಏರಿಕೆಯಾಗಿದೆ.
ಇಂದು ಪ್ರಾಥಮಿಕ ಸಂಪರ್ಕದಿಂದ 64 ಮಂದಿಗೆ ಸೋಂಕು ದೃಢಪಟ್ಟಿದೆ. 92 ಐಎಲ್ಐ ಪ್ರಕರಣಗಳಾಗಿದ್ದು, 14 ಸಾರಿ ಪ್ರಕರಣಗಳಾಗಿವೆ. ಇನ್ನು 99 ಮಂದಿಯ ಸೋಂಕಿನ ಮೂಲ ಪತ್ತೆ ಹಚ್ಚಲಾಗುತ್ತಿದೆ. ಅಂತರ್ ರಾಜ್ಯದಿಂದ ಬಂದ ಓರ್ವನಿಗೆ ಸೋಂಕು ದೃಢಪಟ್ಟಿದೆ.
ಉಡುಪಿಯಲ್ಲಿ ೮೩ ಕೊರೊನಾ ಪಾಸಿಟಿವ್
ಇನ್ನು ಉಡುಪಿ ಜಿಲ್ಲೆಯಲ್ಲಿ 83 ಮಂದಿಗೆ ಕೊರೊನಾ ದೃಢಪಟ್ಟಿದೆ. ಈ ಪೈಕಿ 21 ಮಂದಿಗೆ ಪ್ರಾಥಮಿಕ ಸಂಪರ್ಕದಿಂದ ಸೋಂಕು ದೃಢಪಟ್ಟಿದೆ. 32 ಐ ಎಲ್ ಐ, 3 ಸಾರಿ ಪ್ರಕರಣಗಳಾಗಿವೆ.
27 ಮಂದಿಯ ಸೋಂಕಿನ ಮೂಲ ಪತ್ತೆ ಹಚ್ಚಲಾಗುತ್ತಿದೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 11589ಕ್ಕೆ ಏರಿಕೆಯಾಗಿದೆ. ಸದ್ಯ ಜಿಲ್ಲೆಯಲ್ಲಿ 2398 ಕೊರೊನಾ ಆಕ್ಟಿವ್ ಪ್ರಕರಣಗಳಿವೆ.
ಆ. 31ರಂದು 303 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಆ. 31ರಂದು ಜಿಲ್ಲೆಯಲ್ಲಿ ಇಬ್ಬರು ಸೋಂಕಿಗೆ ಬಲಿಯಾಗಿದ್ದು, ಒಟ್ಟು ಸಾವಿನ ಸಂಖ್ಯೆ 97ಕ್ಕೆ ಏರಿಕೆಯಾಗಿದೆ.