ನವದೆಹಲಿ, ಆ 31 (DaijiworldNews/SM): ‘ಆಯುಷ್ಮಾನ್ ಭಾರತ್’ ಯೋಜನೆಯಡಿ ನೊಂದಾಯಿತ ಸರಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್-19 ಚಿಕಿತ್ಸೆಯು ಸಂಪೂರ್ಣವಾಗಿ ಉಚಿತವಾಗಿದೆ. ಸಾರ್ವಜನಿಕರು ‘ಆಯುಷ್ಮಾನ್ ಭಾರತ್’ ಯೋಜನೆಯ ನೊಂದಾಯಿತ ಆಸ್ಪತ್ರೆಗಳಲ್ಲೇ ಕೊರೋನಾ ಚಿಕಿತ್ಸೆಯನ್ನು ಉಚಿತವಾಗಿ ಪಡೆದುಕೊಳ್ಳಬಹುದು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ತಿಳಿಸಿದ್ದಾರೆ.

ಇತ್ತೀಚೆಗೆ ಕೊರೋನಾ ವಿಚಾರವಾಗಿ ಆಧಾರ ರಹಿತ ಆರೋಪಗಳು ಕೇಳಿಬರುತ್ತಿವೆ. ಇವೆಲ್ಲವೂ ಸತ್ಯಕ್ಕೆ ದೂರವಾಗಿದ್ದು ಜನತೆ ವದಂತಿಗಳಿಗೆ ಕಿವಿಗೊಡದೆ ಸರಕಾರದ ಆರೋಗ್ಯ ಸುರಕ್ಷತಾ ಮಾರ್ಗಸೂಚಿಗಳನ್ನು ಪಾಲಿಸುವುದು ಇಂದಿನ ಅಗತ್ಯತೆಯಾಗಿದೆ ಎಂದರು.
ಪ್ರತೀ ಗ್ರಾ.ಪಂ., ತಾ.ಪಂ., ಜಿ.ಪಂ. ಮಟ್ಟದಲ್ಲಿ ಕಾಲಕಾಲಕ್ಕೆ ಕೊರೋನಾ ಕಾರ್ಯಪಡೆಯ ಸಭೆಗಳನ್ನು ನಡೆಸಿ ಅಗತ್ಯ ತುರ್ತು ಪರಿಹಾರ ಮಾರ್ಗೋಪಾಯಗಳನ್ನು ಕಂಡುಕೊಳ್ಳುವುದು ಅವಶ್ಯಕವಾಗಿದೆ. ಕೊರೋನಾ ವಾರಿಯರ್ಸ್ಗಳಿಗೆ ಸಹಕರಿಸುವ ಜೊತೆಗೆ ಸ್ವಯಂ ಜಾಗೃತಿ ಹಾಗೂ ಆರೋಗ್ಯ ಸುರಕ್ಷಾ ನಿಯಮಗಳನ್ನು ಪಾಲಿಸುವ ಮೂಲಕ ಕೊರೋನಾ ಸಂಕಷ್ಟದಿಂದ ಪಾರಾಗೋಣ ಎಂದರು.