ಉಡುಪಿ, ಸೆ. 01 (DaijiworldNews/MB) : ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೊಸದಾಗಿ ಘೋಷಣೆಯಾಗಿರುವ ಬ್ರಹ್ಮಾವರ ತಾಲೂಕು ಪಂಚಾಯತ್ ನ ನೂತನ ಕಚೇರಿ ಆಗಸ್ಟ್ 31 ಸೋಮವಾರದಂದು ಉದ್ಘಾಟನೆಗೊಂಡಿತು.






















ಮೀನುಗಾರಿಕಾ ಹಾಗೂ ಹಿಂದೂ ಧಾರ್ಮಿಕ ಸಂಸ್ಥೆ ಮತ್ತು ಧರ್ಮಾದಾಯ ದತ್ತಿ ಇಲಾಖೆಯ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಮತ್ತು ಶಾಸಕ ಶ್ರೀ ಕೆ ರಘುಪತಿ ಭಟ್ ಇವರು ಉದ್ಘಾಟನೆ ನೆರವೇರಿಸಿದರು.
ಬಳಿಕ ಮಾತನಾಡಿದ ಕೋಟ ಶ್ರೀನಿವಾಸ ಪೂಜಾರಿ ಅವರು, 'ಅಧಿಕಾರದ ವಿಕೇಂದ್ರೀಕರಣಕ್ಕಾಗಿ ಜಗದೀಶ್ ಶೆಟ್ಟರ್ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಕೆಲವು ಹೊಸ ತಾಲೂಕುಗಳಿಗೆ ಅನುಮೋದನೆ ನೀಡಿದ್ದರು. ನಂತರ ಸರಕಾರದ ಅವಧಿಯಲ್ಲಿ ಹೊಸ ತಾಲೂಕುಗಳು ಸೇರ್ಪಡೆಗೊಂಡಿತು. ಅದರಲ್ಲಿ ಬ್ರಹ್ಮಾವರ ತಾಲ್ಲೂಕು ಕೂಡ ಒಂದು. ಬ್ರಹ್ಮಾವರ ತಾಲೂಕಿನ ಮೂಲ ಸೌಕರ್ಯಗಳನ್ನು ಒದಗಿಸುವಲ್ಲಿ ಇನ್ನಷ್ಟು ಅನುದಾನವನ್ನು ಸರಕಾರದಿಂದ ಬಿಡುಗಡೆ ಮಾಡುವಲ್ಲಿ ಪ್ರಯತ್ನ ಮಾಡುತ್ತೇನೆ. ಈಗ ಪೂರ್ಣಕಾಲಿಕವಾಗಿ ತಾಲೂಕುಗಳು ಕಾರ್ಯ ರೂಪಕ್ಕೆ ಬರುತ್ತಿದೆ. ಅದಕ್ಕೆ ಮೂಲಭೂತ ಸೌಕರ್ಯ ಕಲ್ಪಿಸುತ್ತೇವೆ, ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಶೀಲಾ ಕೆ ಶೆಟ್ಟಿ, ಬ್ರಹ್ಮಾವರ ತಾಲೂಕು ಪಂಚಾಯತ್ ಅಧ್ಯಕ್ಷರಾದ ಜ್ಯೋತಿ ಉದಯಕುಮಾರ್, ಉಪಾಧ್ಯಕ್ಷರಾದ ಸುಧೀರ್ ಶೆಟ್ಟಿ, ಗ್ರಾಮಾಂತರ ಬಿಜೆಪಿಯ ಅಧ್ಯಕ್ಷರಾದ ವೀಣಾ ನಾಯ್ಕ್ ಮತ್ತು ಜಿಲ್ಲಾ ಪಂಚಾಯತ್ ಸದಸ್ಯರು ಹಾಗೂ ತಾಲ್ಲೂಕು ಪಂಚಾಯಿತಿ ಸದಸ್ಯರು, ಇತರ ಪ್ರಮುಖರು, ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು.