ಕಡಬ, ಸೆ. 01 (DaijiworldNews/MB) : ವಿದ್ಯುತ್ ತಗುಲಿ ಆನೆಯೊಂದು ಸಾವನ್ನಪ್ಪಿರುವ ಘಟನೆ ಬಿಳಿನೆಲೆ ಗ್ರಾಮದ ಪುತ್ತಿಲ ಎಂಬಲ್ಲಿ ನಡೆದಿರುವುದು ತಿಳಿದು ಬಂದಿದೆ.

ಸುಮಾರು ಹನ್ನೆರಡು ವರ್ಷ ಪ್ರಾಯದ ಗಂಡಾನೆಯು ಕಾಡಿನಿಂದ ಆಹಾರ ಅರಸಿ ಬಂದಿರುವ ಸಂದರ್ಭ ರಸ್ತೆ ಬದಿಯಲ್ಲಿನ ವಿದ್ಯುತ್ ತಂತಿ ತಗುಲಿ ಆನೆ ಸಾವನ್ನಪ್ಪಿದೆ.
ಇನ್ನು ಸ್ಥಳೀಯರು ಆನೆಯನ್ನು ಗಮನಿಸಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಸುಬ್ರಹ್ಮಣ್ಯ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು ಮರಣೋತ್ತರ ಪರೀಕ್ಷೆ ಬಳಿಕ ಖಚಿತ ಕಾರಣ ತಿಳಿದು ಬರಲಿದೆ.
ಈ ಬಗ್ಗೆ ಇನ್ನಷ್ಟೇ ಹೆಚ್ಚಿನ ಮಾಹಿತಿ ಲಭಿಸಬೇಕಿದೆ.