ಕಾಸರಗೋಡು, ಸೆ. 02 (DaijiworldNews/MB): ಜಿಲ್ಲೆಯ ಚಟ್ಟಂಚಾಲ್ ನಲ್ಲಿ ನಿರ್ಮಾಣಗೊಂಡಿರುವ ಟಾಟಾ ಕೋವಿಡ್ ಆಸ್ಪತ್ರೆಯನ್ನು ಸೆ. 9 ರಂದು ರಾಜ್ಯ ಸರಕಾರಕ್ಕೆ ಹಸ್ತಾಂತರಿಸಲಾಗುವುದು.

ಸಾಂದರ್ಭಿಕ ಚಿತ್ರ
ಅಂದು ಮಧ್ಯಾಹ್ನ 12 ಗಂಟೆಗೆ ನಡೆಯುವ ಸಮಾರಂಭದಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ರವರು ವೀಡಿಯೋ ಕಾನ್ಫರೆನ್ಸ್ ಮೂಲಕ ಹಸ್ತಾಂತರ ಕಾರ್ಯಕ್ರಮಕ್ಕೆ ಚಾಲನೆ ನೀಡುವರು. ಕಂದಾಯ ಸಚಿವ ಇ.ಚಂದ್ರಶೇಖರನ್ ಅಧ್ಯಕ್ಷತೆ ವಹಿಸುವರು.
ರಾಜ್ಯ ಸರಕಾರದ ಪರವಾಗಿ ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು ಅವರು ಆಸ್ಪತ್ರೆಯ ಹೊಣೆಗಾರಿಕೆಯನ್ನು ಟಾಟಾ ಸಮೂಹ ಸಂಸ್ಥೆಯಿಂದ ಪಡೆದುಕೊಳ್ಳುವರು. ಸಂಸದ ರಾಜ್ ಮೋಹನ್ ಉಣ್ಣಿತ್ತಾನ್, ಶಾಸಕರಾದ ಎನ್.ಎ.ನೆಲ್ಲಿಕುನ್ನು, ಎಂ.ಸಿ.ಕಮರುದ್ದೀನ್, ಕೆ.ಕುಂಞಿರಾಮನ್, ಎಂ.ರಾಜಗೋಪಾಲನ್, ಜಿಲ್ಲಾ ಪಂಚಾಯತ್ ಅಧ್ಯಕ್ಷ ಎ.ಜಿ.ಸಿ.ಬಶೀರ್ ಸಹಿತ ಆಹ್ವಾನಿತ 50 ಮಂದಿ ಉಪಸ್ಥಿತರಿರುವರು.