ಕಾಸರಗೋಡು, ಸೆ. 02 (DaijiworldNews/SM): ಅಮಾನ್ಯಗೊಂಡ ಒಂದು ಸಾವಿರ ಮುಖಬೆಲೆಯ 17 ಲಕ್ಷ ರೂ. ನಗದನ್ನು ಮಂಜೇಶ್ವರ ಪೊಲೀಸರು ಉಪ್ಪಳದಿಂದ ವಶಕ್ಕೆ ತೆಗೆದುಕೊಂಡಿದ್ದಾರೆ.

ಮಂಗಳವಾರ ರಾತ್ರಿ ಉಪ್ಪಳ ಪೇಟೆಯಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದಾಗ ಅಕ್ರಮ ಸಾಗಾಟ ಪತ್ತೆಯಾಗಿದೆ. ಎರಡು ಕಾರುಗಳಲ್ಲಿ ಹಣವನ್ನು ಸಾಗಾಟ ಮಾಡಲಾಗುತ್ತಿತ್ತು ಎನ್ನಲಾಗಿದೆ. ಎರಡು ಕಾರುಗಳನ್ನು ತಪಾಸಣೆ ನಡೆಸಿದಾಗ ಹಣ ಪತ್ತೆಯಾಗಿದ್ದು, ಇಬ್ಬರನ್ನು ವಶಕ್ಕೆ ತೆಗೆದುಕೊಂಡು ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.