ಮಂಗಳೂರು, ಸೆ. 02 (DaijiworldNews/SM): ದ.ಕ. ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ಬುಧವಾರ ಒಂದೇ ದಿನ ಸುಮಾರು 414 ಮಂದಿಯಲ್ಲಿ ಸೋಂಕು ದೄಢಪಟ್ಟಿದೆ.

ಈ ನಡುವೆ ಜಿಲ್ಲೆಯಲ್ಲಿ ಇಂದು 346 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ದ.ಕ. ಜಿಲ್ಲೆಯಲ್ಲಿ ಒಟ್ಟು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ 10498ಕ್ಕೆ ಏರಿಕೆಯಾಗಿದೆ. ಸದ್ಯ 2600 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಜಿಲ್ಲೆಯಲ್ಲಿ ಇಂದು ಮತ್ತೆ 6 ಮಂದಿ ಸಾವನ್ನಪ್ಪಿದ್ದು, ಒಟ್ಟು ಜಿಲ್ಲೆಯಲ್ಲಿ ಕೊರೊನಾ ಸಾವಿನ ಸಂಖ್ಯೆ 381ಕ್ಕೆ ಏರಿಕೆಯಾಗಿದೆ.
ಇಲ್ಲಿಯ ತನಕ 99414 ಮಂದಿಯನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಈ ಪೈಕಿ 85935 ಮಂದಿಯ ವರದಿ ನೆಗೆಟಿವ್ ಬಂದಿದೆ. ದ.ಕ ಜಿಲ್ಲೆಯಲ್ಲಿ 13479 ಮಂದಿಯಲ್ಲಿ ಇಲ್ಲಿಯ ತನಕ ಪಾಸಿಟಿವ್ ದೃಢಪಟ್ಟಿದೆ.