ಕರಾವಳಿ, ಸೆ. 02 (DaijiworldNews/SM): ಉಡುಪಿ ಜಿಲ್ಲೆಯಲ್ಲಿ ಬುಧವಾರದಂದು ಮತ್ತೆ 167 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 11924ಕ್ಕೆ ಏರಿಕೆಯಾಗಿದೆ.

ಇಂದು ಪತ್ತೆಯಾದ ಸೋಂಕಿತರ ಪೈಕಿ 112 ಮಂದಿಯಲ್ಲಿ ರೋಗಲಕ್ಷಣಗಳು ಪತ್ತೆಯಾಗಿವೆ. ಪ್ರಾಥಮಿಕ ಸಂಪರ್ಕದಿಂದ 46 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. 61 ಸಾರಿ ಪ್ರಕರಣಗಳಾಗಿವೆ. 56 ಮಂದಿಯ ಸೋಂಕಿನ ಮೂಲ ಪತ್ತೆ ಹಚ್ಚಲಾಗುತ್ತಿದೆ. ಒಬ್ಬರು ವಿದೇಶದಿಂದ ಮರಳಿದವರಲ್ಲಿ ಸೋಂಕು ಪತ್ತೆಯಾಗಿದೆ.
250 ಮಂದಿ ಬುಧವಾರದಂದು ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಸದ್ಯ 2221 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು 3 ಮಂದಿ ಸಾವನ್ನಪ್ಪಿದ್ದು, ಒಟ್ಟು ಸಾವಿನ ಸಂಖ್ಯೆ 102ಕ್ಕೆ ಏರಿಕೆಯಾಗಿದೆ.