ಮಂಗಳೂರು, ಸೆ. 3(DaijiworldNews/HR):ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ್ದಾನೆಂದು ಆರೋಪಿಸಿ ದಕ್ಷಿಣ ಕನ್ನಡ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಪೋಲಿಸ್ ವಿರುದ್ಧ ಬೆಂಗಳೂರಿನ ಯುವತಿ ಮಂಗಳೂರಿನ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ನಿವಾಸಿ ಸಾಯಬಣ್ಣ ವಿರುದ್ಧ ಅತ್ಯಾಚಾರ ಎಸಗಿದ ಆರೋಪ ಕೇಳಿಬಂದಿದ್ದು, ಈತನ ಜೊತೆಗೆ ಬೆಂಗಳೂರಿನ ರಮೇಶ್ ಗೌಡ ಎಂಬಾತ ಬೆದರಿಕೆಯೊಡ್ಡಿದ್ದಾನೆ ಎಂದು ಪ್ರಕರಣ ದಾಖಲಾಗಿದೆ.
ಮೇ 20ರಂದು ಮದುವೆ ಮಾತುಕತೆಗಾಗಿ ಬೆಂಗಳೂರಿಗೆ ಬಂದಿದ್ದ ಆರೋಪಿ ಅಲ್ಲೇ ಉಳಿದುಕೊಂಡು ಅತ್ಯಾಚಾರ ಎಸಗಿದ್ದಾನೆ. ಜೂನ್ 12 ರಂದು ಮಂಗಳೂರಿನ ವಸತಿಗೃಹಕ್ಕೆ ಕರೆಸಿಕೊಂಡು ಅತ್ಯಾಚಾರ ಎಸಗಿದ್ದು ಮದುವೆಯಾಗಲು ನಿರಾಕರಿಸಿದ್ದಾನೆ ಎಂದು ಯುವತಿ ದೂರಿನಲ್ಲಿ ಆರೋಪಿಸಿದ್ದಾರೆ.