ಬೆಂಗಳೂರು, ಮೇ 04: ಜಯನಗರದ ಶಾಸಕ, ಬಿಜೆಪಿ ನಾಯಕ, ಬಿಎನ್ ವಿಜಯ್ ಕುಮಾರ್ (60) ಅವರು ಶುಕ್ರವಾರ ಬೆಳಗಿನ ಜಾವ 1 ಗಂಟೆಗೆ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಗುರುವಾರ ಚುನಾವಣೆಗೆ ಪ್ರಚಾರ ಮಾಡುತ್ತಿದ್ದಾಗಲೇ ಹೃದಯಾಘಾತಕ್ಕೆ ಒಳಗಾಗಿದ್ದ ಅವರನ್ನು ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ. ಜಯನಗರ ಕ್ಷೇತ್ರದಿಂದ ಎರಡು ಬಾರಿ ಆಯ್ಕೆಯಾಗಿದ್ದ ಜಯದೇವ್ ಹಲವು ದಿನಗಳಿಂದ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು.
ಬಿಜೆಪಿ ಅಭ್ಯರ್ಥಿ ವಿಜಯ್ ಕುಮಾರ್ ಹಠಾತ್ ಸಾವಿನಿಂದ ಜಯನಗರ ವಿಧಾನಸಭೆ ಕ್ಷೇತ್ರದ ಚುನಾವಣೆ ಮುಂದೂಡಲಾಗಿದೆ. ಅವಿವಾಹಿತರಾಗಿದ್ದ ವಿಜಯ್ ಕುಮಾರ್ ಅವರು ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ಗೃಹಸಚಿವ ರಾಮಲಿಂಗಾರೆಡ್ಡಿ ಪುತ್ರಿಯ ವಿರುದ್ಧ ಕಣಕ್ಕೆ ಇಳಿದಿದ್ದ ಇವರು ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲಿದ್ದರು.