ಬೈಂದೂರು, ಸೆ 03 (DaijiworldNews/PY): ಗ್ರಾಮ ಪಂಚಾಯತ್ ಚುನಾವಣೆ ಮುಗಿದ ಮೇಲೆ ಬಿಜೆಪಿಯ ಮುಖಂಡರು ಕಾಂಗ್ರೆಸ್ ಸೇರ್ಪಡೆಗೊಳ್ಳಲಿದ್ದಾರೆ. ಬಿಜೆಪಿಯ ನಿಷ್ಠಾವಂತ ಮುಖಂಡರು ಕಾಂಗ್ರೆಸ್ ಸೇರಲಿದ್ದಾರೆ. ಈಗಾಗಲೇ ಮಾತುಕತೆಗಳು ಮುಗಿದಿವೆ. ಕಾದು ನೋಡಿ ಎಂದು ಮಾಜಿ ಶಾಸಕ ಗೋಪಾಲ ಪೂಜಾರಿ ಹೇಳಿದ್ದಾರೆ.

ನಿನ್ನೆ ಅಲೂರು ಮಂಜಯ್ಯ ಶೆಟ್ಟಿ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರಿದ್ದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಆಲೂರು ಮಂಜಯ್ಯ ಶೆಟ್ಟಿಯವರು ನಿಜ ಸ್ಥಿತಿಯನ್ನು ತಿರುಚುವ ಕೆಲಸ ಮಾಡಿದ್ದಾರೆ. ಎರಡು ಬಾರಿ ಜಿಲ್ಲಾ ಪಂಚಾಯತ್, ಒಂದು ಬಾರಿ ತಾಲೂಕು ಪಂಚಾಯತ್ನಲ್ಲಿ ಸ್ಪರ್ಧಿಸಿ ಎರಡು ಬಾರಿ ಗೆದ್ದು, ಒಮ್ಮೆ 80 ಮತಗಳ ಅಂತರದಲ್ಲಿ ಸೋತಿದ್ದಕ್ಕೆ ಅವರು ಹತಾಶರಾಗಿ ಮಾತನಾಡಿದ್ದಾರೆ.
ಚುನಾವಣೆಯಲ್ಲಿ ಸೋಲು ಗೆಲುವು ಸಹಜ. ನಾನು ಸೋತಿದ್ದೇನೆ, ಗೆದ್ದಿದ್ದೇನೆ. ಆದರೆ ಮಂಜಯ್ಯ ಶೆಟ್ಟರು ಕಾಂಗ್ರೆಸ್ ಕಾರ್ಯಕರ್ತರ ಕಾರ್ಯಕರ್ತರ ಬಗ್ಗೆ ದೂರುವುದು ಸರಿಯಲ್ಲ. ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಉತ್ತಮವಾಗಿ ಕೆಲಸ ಮಾಡಿದ್ದಾರೆ. ಹೀಗಿರುವಾಗ ಬರೀ 80 ಮತಗಳಲ್ಲಿ ಸೋತಿರುವಾಗ ಈ ರೀತಿಯ ಹೇಳಿಕೆ ನೀಡುವುದು ಸರಿಯಲ್ಲ. ಇಂತಹ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ದೂರು ಅವರ ಬಗ್ಗೆ ತಪ್ಪು ಮಾಹಿತಿ ನೀಡುವುದು ವುದು ಸರಿಯಲ್ಲ. ಆಮಿಷ ಒಡ್ಡಿ ಬಿಜೆಪಿ ಪಕ್ಷಕ್ಕೆ ಸೇರಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಲಾಭ ಪಡೆದಿದ್ದಾರೆ. ಇದರಿಂದ ಪಕ್ಷಕ್ಕೆ ಯಾವುದೇ ನಷ್ಟವಾಗುವುದಿಲ್ಲ. ಆದರೆ, ಆ ಭಾಗದಲ್ಲಿ ಹೊಸ ಇರುವ ಕಾರ್ಯಕರ್ತರಲ್ಲಿ ನಾಯಕತ್ವ ಬೆಳೆಸಿ ಕೆಳ ಹಂತದಿಂದ ಪಕ್ಷವನ್ನು ಕಟ್ಟುವ ಕೆಲಸ ಮಾಡುತ್ತೇನೆ ಎಂದಿದ್ದಾರೆ.
ಗೋಪಾಲ ಪೂಜಾರಿಯವರ ಹೇಳಿಕೆ ಬಿಜೆಪಿ ಪಾಳೆಯದಲ್ಲಿ ಸಂಚಲನಕ್ಕೂ ಕಾರಣವಾಗಲಿದೆ. ಮುಂದೆ ಏನಾಗುತ್ತದೋ ಕಾದು ನೋಡಬೇಕಾಗಿದೆ. ಒಟ್ಟಾರೆ ಪಕ್ಷಾಂತರ ಪರ್ವ ಆರಂಭವಾಗಿದೆ.