ಮಂಗಳೂರು, ಸೆ. 03 (DaijiworldNews/SM): ದ.ಕ. ಜಿಲ್ಲೆಯಲ್ಲಿ ಗುರುವಾರ 316 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಆ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 13795ಕ್ಕೆ ಏರಿಕೆಯಾಗಿದೆ.

ಈ ನಡುವೆ ಗುರುವಾರದಂದು 208 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 10706ಕ್ಕೆ ತಲುಪಿದೆ. 2705ಮಂದಿ ಸದ್ಯ ಜಿಲ್ಲೆಯಲ್ಲಿ ಚಿಕಿತ್ಸೆಯಲ್ಲಿದ್ದಾರೆ. ಗುರುವಾರ ಮತ್ತೆ ಮೂವರು ಸೋಂಕಿಗೆ ಬಲಿಯಾಗಿದ್ದು, ಜಿಲ್ಲೆಯಲ್ಲಿ ಒಟ್ಟು ಕೋವಿಡ್ ಮರಣ ಸಂಖ್ಯೆ 384ಕ್ಕೆ ಏರಿಕೆಯಾಗಿದೆ.
ಇಂದು 54 ಮಂದಿಯಲ್ಲಿ ಸಂಪರ್ಕದಿಂದ ಸೋಂಕು ದೃಢಪಟ್ಟಿದೆ. 129 ಮಂದಿಯಲ್ಲಿ ಐಎಲ್ಐ ಪ್ರಕರಣ ಪತ್ತೆಯಾಗಿದೆ. 13 ಮಂದಿಯಲ್ಲಿ ಸಾರಿ ಪ್ರಕರಣ ಪತ್ತೆಯಾಗಿದೆ. 120 ಮಂದಿಯ ಸೋಂಕಿನ ಮೂಲ ಪತ್ತೆಹಚ್ಚಲಾಗುತ್ತಿದೆ.
ಉಡುಪಿ ಜಿಲ್ಲೆಯಲ್ಲಿ 226 ಮಂದಿಯಲ್ಲಿ ಪಾಸಿಟಿವ್:
ಇನ್ನು ಉಡುಪಿ ಜಿಲ್ಲೆಯಲ್ಲಿ 226 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಈ ನಡುವೆ ಗುರುವಾರದಂದು 893 ಮಂದಿಯ ವರದಿ ನೆಗೆಟಿವ್ ಬಂದಿದೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 12143ಕ್ಕೆ ಏರಿಕೆಯಾಗಿದೆ.
ಇಂದು 121 ಮಂದಿಯಲ್ಲಿ ಸಂಪರ್ಕದಿಂದ ಸೋಂಕು ದೃಢಪಟ್ಟಿದೆ. 68 ಮಂದಿಯಲ್ಲಿ ಐಎಲ್ ಐ ಪ್ರಕರಣ ದೃಢವಾಗಿದೆ. 8 ಮಂದಿಯಲ್ಲಿ ಸಾರಿ ಪ್ರಕರಣ ಪತ್ತೆಯಾಗಿದೆ. 27 ಮಂದಿಯ ಸೋಂಕಿನ ಮೂಲ ಪತ್ತೆ ಹಚ್ಚಲಾಗುತ್ತಿದೆ. ಇನ್ನು ಹೊರರಾಜ್ಯ, ವಿದೇಶದಿಂದ ಬಂದ ತಲಾ ಒಬ್ಬರಲ್ಲಿ ಸೋಂಕು ಪತ್ತೆಯಾಗಿದೆ.
118 ಮಂದಿಯಲ್ಲಿ ರೋಗ ಲಕ್ಷಣಗಳು ಪತ್ತೆಯಾಗಿದ್ದು, 108 ಮಂದಿ ಲಕ್ಷಣ ರಹಿತ ಸೋಂಕಿತರಾಗಿದ್ದಾರೆ. ಗುರುವಾರ ಮತ್ತೆ 328 ಮಂದಿ ಗುಣಮುಖರಾಗಿದ್ದು, ಜಿಲ್ಲೆಯಲ್ಲಿ ಒಟ್ಟು 9929 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. 2115 ಮಂದಿ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನು ಗುರುವಾರ ಮತ್ತೆ ನಾಲ್ವರು ಸೋಂಕಿಗೆ ಬಲಿಯಾಗಿದ್ದು, ಒಟ್ಟು ಕೋವಿಡ್ ಸಾವಿನ ಸಂಖ್ಯೆ 106ಕ್ಕೆ ಏರಿಕೆಯಾಗಿದೆ.